ಸಾಂಸ್ಕøತಿಕ ಚಟುವಟಿಕೆ ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಧನಸಹಾಯ : ಅರ್ಜಿ ಆಹ್ವಾನ

ಕೊಪ್ಪಳ ಸೆ. : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರವಾಗಿ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಧನಸಹಾಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾಪ್ರಕಾರಗಳಲ್ಲಿ ನಿರಂತರವಾಗಿ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ಧನಸಹಾಯ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರಗಳು ಮತ್ತು ವೇಷ ಭೂಷಣ ಖರೀದಿಗೆ ಧನಸಹಾಯ ಹಾಗೂ ಕಲಾವಿದರ ಚಿತ್ರ/ ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಧನಸಹಾಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಇಲಾಖೆಯ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿsiಡಿi.ಛಿo.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಸಂಘ ಸಂಸ್ಥೆಗಳು ತಮ್ಮ ಅರ್ಜಿಯನ್ನು ಸೆ. 20 ರಿಂದ ಅಕ್ಟೋಬರ್. 15 ರವರೆಗೆ ಮಾತ್ರ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ದಾಖಲೆಗಳ ಮೂಲ ಪ್ರತಿಗಳನ್ನೇ ಸ್ಕ್ಯಾನ್ ಮಾಡಿ ಸಲ್ಲಿಸಬೇಕು. ಜೆರಾಕ್ಸ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಕಳುಹಿಸಿದ ದಾಖಲೆಗಳು ಸರಿಯಾಗಿ ಓದಲು ಕಾಣಿಸದಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಎಲ್ಲಾ ಅರ್ಜಿ ಹಾಗೂ ದಾಖಲೆಗಳನ್ನು ಜಿಲ್ಲೆಯ ಸಹಾಯಕ ನಿರ್ದೇಶಕರು, ಜಿಲ್ಲಾ ಸಮಿತಿಯಲ್ಲಿ ಪರಿಶೀಲಿಸಿ ರಾಜ್ಯ ಸಮಿತಿಯ ಮುಂದೆ ಮಂಡಿಸಲಾಗುತ್ತದೆ. ಅಧಿಕೃತ ಲೆಕ್ಕ ಪರಿಶೋಧಕರಿಂದ ಆಡಿಟ್ ಆಗಿರುವುದನ್ನು ಮಾತ್ರ ಪರಿಗಣಿಸಲಾಗುವುದು. ಧನಸಹಾಯ ಪಡೆದ ಸಂಸ್ಥೆಗಳು ಸಮಾಜಿಕ ತಪಾಸಣೆಗೆ ಒಳಪಡುತ್ತವೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ಹಾಗೂ ದೂರವಾಣಿ ಸಂಖ್ಯೆ. 08022221271/ 22213530 ಅಥವಾ ಕೊಪ್ಪಳ ಜಿಲ್ಲಾ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08539-221417 ಕ್ಕೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======

Please follow and like us:
error