ಸಾಕ್ಷರತಾ ಕಾರ್ಯಕ್ರಮ : ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ


ಕೊಪ್ಪಳ ಅ. ೧೬ : ಕೊಪ್ಪಳ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಸಾಕ್ಷರತಾ ಕಾರ್ಯಕ್ರಮ ಏರ್ಪಡಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ/ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕೊಪ್ಪಳದಡಿಯಲ್ಲಿ ಅನಕ್ಷರಸ್ಥರಿಗೆ ಮೂಲ ಸಾಕ್ಷರತಾ ಕಾರ್ಯಕ್ರಮವನ್ನು ಹಾಗೂ ನಗರ ಅಥವಾ ಕೊಳಚೆ ಪ್ರದೇಶದ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಕಾರ್ಯಕ್ರಮಕ್ಕೆ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ (ವಿ.ಟಿ.ಪಿ.) ನಡೆಸಲು ಅನುಮತಿ ಪಡೆದ ಸಂಸ್ಥೆಯವರು ಪ್ರಸ್ತಾವನೆಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲು ಅ. ೨೫ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲಿಚ್ಛಿಸುವ ಅರ್ಹ ಸಂಸ್ಥೆಯವರು ಅಗತ್ಯ ದಾಖಲೆಯೊಂದಿಗೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಅ. ೨೪ ರೊಳಗಾಗಿ ಉಚಿತವಾಗಿ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿ ಕಛೇರಿ ಸಮಯದಲ್ಲಿ ಪಡೆಯಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Please follow and like us:
error