ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ : ಕೇಂದ್ರದ ವಿರುದ್ದ ಪ್ರತಿಭಟನೆ

ಕೊಪ್ಪಳ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಆಶೋಕ ವೃತ್ತದಲ್ಲಿ ಶ್ರೀ ಶಿವಕುಮಾರ ಸಿದ್ದಗಂಗಾ ಸ್ವಾಮಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಭಾರತ ರತ್ನ ಪ್ರಶಸ್ತಿ ನೀಡುವಂತೆ ಪ್ರತಿಭಟನೆ ನಡಸಿ, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ ಮಾತನಾಡಿ, ರಾಜ್ಯಕ್ಕೆ ಕೇಂದ್ರ ನರೇಂದ್ರ ಮೋದಿ ಸರ್ಕಾರ ನಿರಂತರ ಅನ್ಯಾಯ ಮಾಡುತ್ತಲೇ ಬಂದಿದೆ. ನಡೆದಾಡುವ ದೇವರು ಶ್ರೀ ಶಿವಕುಮಾರಸ್ವಾಮಿಗಳಿಗೆ ಭಾರತ ರತ್ನ ನೀಡದೆ ಅನ್ಯಾಯ ಮಾಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಡಳಿತದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶ್ರೀಗಳಿಗೆ ಪ್ರಶಸ್ತಿ ನೀಡಲು ಮನವಿ ಮಾಡಿದ್ದರು. ರಾಜ್ಯದ ಜನಪ್ರತಿನಿಧಿ, ಭಕ್ತರು, ವಿದ್ಯಾರ್ಥಿಗಳು, ಹಿರಿಯರು ಭಾರತ ರತ್ನ ನೀಡಲು ಒತ್ತಾಯಿಸಿದರು ಕೇಂದ್ರ ಸರ್ಕಾರ ನೀಡದೆ ಅಗೌರವ ತೋರಿದೆ ಕೂಡಲೇ ಶ್ರೀಗಳಿಗೆ ಪ್ರಶಸ್ತಿ ನೀಡಿಬೇಕು ಅಂತ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಎಲ್ಲಾ ತಾಲೂಕ ಘಟಕದ ಮಹಿಳಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಿದ್ದರು.

Please follow and like us:
error