You are here
Home > Koppal News > ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ ನ. : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪ್ರಸಕ್ತ ಸಾಲಿನ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನ. ೨೫ ರಂದು ಏರ್ಪಡಿಸಲಾದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ನೇಮಕಾತಿ, ಬೆಂಗಳೂರು ರವರ ಸಂದೇಶದ ಮೆರೆಗೆ ನ. ೨೫ ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯಲಿರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Top