ಸಿ.ಎಂ.ಇ.ಜಿ.ಪಿ ಯೋಜನೆಯಡಿ ಸಾಲ ಸೌಲಭ್ಯ : ಡಿ. ೧೮ ರಿಂದ ಕೊಪ್ಪಳದಲ್ಲಿ ಸಂದರ್ಶನ

ಕೊಪ್ಪಳ ಡಿ.೧೨   ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಖ್ಯ ಮಂತ್ರಿಗಳ ಸೃಜನ (ಸಿ.ಎಂ.ಇ.ಜಿ.ಪಿ) ಯೋಜನೆ ಹಾಗೂ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದವರಿಗೆ ಸಾಲ ಸೌಲಭ್ಯವನ್ನು ನೀಡುವ ಕುರಿತು ಸಂದರ್ಶನವನ್ನು ಡಿ. ೧೮ ರಿಂದ ೨೧ ರವರೆಗೆ ಕೊಪ್ಪಳದಲ್ಲಿ ಆಯೋಜಿಸಲಾಗಿದ್ದು, ಸಂದರ್ಶನಕ್ಕ ಹಾಜರಾಗುವಂತೆ ಅರ್ಹ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.
ಮುಖ್ಯ ಮಂತ್ರಿಗಳ ಸೃಜನ ಯೋಜನೆ (ಸಿ.ಎಂ.ಇ.ಜಿ.ಪಿ) ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಬೇಕಾಗಿದ್ದು, ಈ ಸಂದರ್ಶನವನ್ನು ಜಂಟಿ ನಿರ್ದೇಶಕ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಯೂರ ಲಾಡ್ಜ್ ಎದುರು ಹೊಸಪೇಟೆ ರಸ್ತೆ ಕೊಪ್ಪಳ ಇಲ್ಲಿ ಆಯೋಜಿಸಲಾಗಿದೆ. ಆನ್‌ಲೈನ್ ನಲ್ಲಿ ಸಲ್ಲಿಸಿದ ಅರ್ಜಿ, ಪೋಟೋ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಿ ತಹಶೀಲ್ದಾರರಿಂದ ಪಡೆದ ಜಾತಿ ಪ್ರಮಾಣ ಪತ್ರ, ಅಂಗವಿಕಲ ಅಭ್ಯರ್ಥಿಗಳು ವೈದ್ಯಕೀಯ ದೃಢೀಕರಣ ಪತ್ರ, ಮಾಜಿ ಸೈನಿಕರು ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ಘಟಕವನ್ನು ಪ್ರಾರಂಭಿಸಲು ಉದ್ದೇಶಿಸಿರುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ ಗ್ರಾಮ ಲೆಕ್ಕಾಧಿಕಾರಿಯಿಂದ ಜನಸಂಖ್ಯೆ ದೃಢೀಕರಣ ಪತ್ರವನ್ನು ಪಡೆದಿರಬೇಕು. ಯೋಜನಾ ವರದಿ, ಯೋಜನೆಯ ಬಗ್ಗೆ ಅನುಭವ ಪಡೆದಿದ್ದರೆ ಅನುಭವ ಪ್ರತ್ರದೊಂದಿಗೆ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ವಿವರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ತಾಲೂಕವಾರು ಸಂದರ್ಶನವನ್ನು ಆಯೋಜಿಸಲಾಗಿದ್ದು, ವಿವರ ಇಂತಿದೆ. ಪಿ.ಎಂ.ಇ.ಜಿ.ಪಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಕೊಪ್ಪಳ, ಗಂಗಾವತಿ, ಕಾರಟಗಿ, ಯಲಬುರ್ಗಾ, ಕುಕನೂರ ಮತ್ತು ಕುಷ್ಟಗಿ ತಾಲೂಕಿನ ಅಭ್ಯರ್ಥಿಗಳಿಗೆ ಡಿ. ೧೮ ರಂದು ಸಂದರ್ಶನ ಏರ್ಪಡಿಸಲಾಗಿದೆ. ಸಿ.ಎಂ.ಇ.ಜಿ.ಪಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಯಲಬುರ್ಗಾ ಮತ್ತು ಕುಷ್ಟಗಿ ತಾಲೂಕಿನ ಅಭ್ಯರ್ಥಿಗಳಿಗೆ ಡಿ. ೧೯ ರಂದು, ಕೊಪ್ಪಳ ತಾಲೂಕಿನವರಿಗೆ ಡಿ. ೨೦ ರಂದು, ಗಂಗಾವತಿ ಮತ್ತು ಕಾರಟಗಿ ತಾಲೂಕಿನ ಅಭ್ಯರ್ಥಿಗಳಿಗೆ ಡಿ. ೨೧ ರಂದು ಸಂದರ್ಶನವನ್ನು ಆಯೋಜಿಸಲಾಗಿದ್ದು, ಸಂದರ್ಶನವು ಬೆಳಿಗ್ಗೆ ೧೧ ರಿಂದ ಸಾಯಂಕಾಲ ೦೫ ಗಂಟೆಯವರೆಗೆ ನಡೆಯಲಿದೆ ಎಂದು ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು   ತಿಳಿಸಿದ್ದಾರೆ.

Please follow and like us:
error