fbpx

ಸೇವಾ ವಿದ್ಯಾಲಯದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ


ಕೊಪ್ಪಳ : ಕಿನ್ನಾಳ ಗ್ರಾಮದ ಸೇವಾ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೨ನೇ ಸ್ವಾತಂತ್ರೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಢಿ ನಂತರ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಶಿಕ್ಷಕರು ಸ್ವಾತಂತ್ರ್ಯ ಪಡೆಯಲು ಯಾವ ರೀತಿ ತ್ಯಾಗ , ಬಲಿದಾನಗಳನ್ನು ನಮ್ಮ ಹೋರಾಟಗಾರರು ಮಾಡಿದರು ಎನ್ನುವುದರ ಕುರಿತು ವಿಸ್ತೃತವಾಗಿ ಮಾತನಾಡಿದರು. ನಂತರ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Please follow and like us:
error
error: Content is protected !!