ಸ್ಕೌಟ್ಸ್ ಗೈಡ್ಸ್ ಪಥಸಂಚಲನ : ಸರಸ್ವತಿ ವಿದ್ಯಾಮಂದಿರ ಶಾಲೆಗೆ ಪ್ರಥಮ ಬಹುಮಾನ


ಕೊಪ್ಪಳ : ೬೩ನೇ ಕನ್ನಡ ರಾಜ್ಯೋತ್ಸವ ನಿಮಿತ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್‍ಯಕ್ರಮದ ಪಥಸಂಚಲನದಲ್ಲಿ ಭಾಗವಹಿಸಿದ್ದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಪ್ರಥಮ ಬಹುಮಾನ ದೊರೆತಿದೆ. ಚೇತನಕುಮಾರ ನೇತೃತ್ವದಲ್ಲಿ ಶಾಲೆಯ ಸ್ಕೌಟ್ಸ್ ತಂಡ ಪಥಸಂಚಲನದಲ್ಲಿ ಭಾಗವಹಿಸಿತ್ತು. \

ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಶಂಕರವರು ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ರಾಘವೆಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಎಸ್ಪಿ ರೇಣುಕಾ ಕೆ.ಸುಕುಮಾರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಶಾಲೆಯ ಮಕ್ಕಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Please follow and like us:
error