ಸ್ನಾತಕೋತ್ತರ ಕೇಂದ್ರ ಮತ್ತು ವೃತ್ತಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅನುಮೋದನೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್‌ನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಕೇಂದ್ರ ಮತ್ತು ವೃತ್ತಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್‌ನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಕೇಂದ್ರ ಮತ್ತು ವೃತ್ತಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಸರ್ಕಾರಕ್ಕೆ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಯಂತೆ ಒಟ್ಟು ರೂ. ೮೫.೦೦ ಕೋಟಿಗಳ ಅಂದಾಜು ವೆಚ್ಚದ ಕಾಮಗಾರಿಗಳಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸ್ನಾತಕೋತ್ತರ ಕೇಂದ್ರ ಮತ್ತು ವೃತ್ತಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ತಗಲುವ ಒಟ್ಟು ರೂ. ೮೫.೦೦ ಕೋಟಿಗಳಲ್ಲಿ ರೂ. ೬೦.೦೦ ಕೋಟಿಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ತನ್ನ ಆಂತರಿಕ ಸಂಪನ್ಮೂಲದಿಂದ ಭರಿಸಲಿದೆ. ಉಳಿದ ರೂ. ೨೫.೦೦ ಕೋಟಿಗಳನ್ನು ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಭರಿಸಲಿದೆ. ಈ ಯೋಜನೆ ಅನುಷ್ಠಾನದ ಬಗ್ಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರಸ್ತಾಪಿತ ಕಟ್ಟಡ ಕಾಮಗಾರಿಗಳನ್ನು ೩ ವರ್ಷಗಳ ಅವಧಿಯೊಳಗಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು) ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.