ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಕಣ್ಮಣಿ : ಹೆಚ್. ವಿಶ್ವನಾಥ ರೆಡ್ಡಿ


ಕೊಪ್ಪಳ ಜ. ೧ : ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಕಣ್ಮಣಿಯಾಗಿದ್ದರು ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗಂಗಾವತಿ ತಾಲೂಕ ಪಂಚಾಯತ್, ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ, ನೆಹರು ಯುವ ಕೇಂದ್ರ ಹಾಗೂ ಗಂಗಾವತಿ ಎಸ್.ಕೆ.ಎನ್.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಹಾಗೂ ಚಿಕಾಗೋ ಭಾಷಣದ ೧೨೫ನೇ ವರ್ಷಾಚರಣೆಯ ಅಂಗವಾಗಿ ಗಂಗಾವತಿಯಲ್ಲಿ ಶನಿವಾರದಂದು ಆಯೋಜಿಸಲಾದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಕಣ್ಮಣಿ ಮತ್ತು ಸಾಂಸ್ಕೃತಿಕ ಕ್ಷೇತ್ರದ ರಾಯಭಾರಿಯಾಗಿದ್ದರು. ಇಂದಿನ ಯುವ ಶಕ್ತಿಯು ನಾಳೆಯ ದಶೇದ ಶಕ್ತಿಯಾಗಿ ಹೊರಹೋಮ್ಮಲಿದ್ದು, ಎಲ್ಲಾ ಯುವಕರು ವಿವೇಕಾನಂದರ ಜೀವನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್.ವಿಶ್ವನಾಥ ರೆಡ್ಡಿ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರವರ ಕುರಿತು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಕೊಪ್ಪಳ ರಾಮಕೃಷ್ಣ ಆಶ್ರಮದ ಚೈತನ್ಯಾನಂದ ಸ್ವಾಮೀಜಿ ಅವರು ಮಾತನಾಡಿ, ಈಗಿನ ಯುವಕರು ದುಶ್ಚಟಗಳಿಗೆ ಬಲಿಯಾಗದೇ ಸ್ವಾಮಿ ವಿವೇಕಾನಂದರ ಜೀವನ ಶೈಲಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಮ್ಮ ಜೀವನ ಸಮೃದ್ದವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಗಂಗಾವತಿ ಎಸ್.ಕೆ.ಎನ್.ಜಿ. ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಜಿ. ಹೆಬಸೂರು ಅವರು ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ್, ಟಿಎಮ್‌ಎಇ ಶಿಕ್ಷಣ ಮಹಾವಿದ್ಯಾಲಯದ ಕೆ.ಸಿ. ಕುಲಕರ್ಣಿ, ಎಸ್.ಕೆ.ಎನ್.ಜಿ. ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಬ್ದುಲ್ ರಹೆಮಾನ್, ಗಂಗಾವತಿ ತಾಲೂಕು ಕ್ರೀಡಾಧಿಕಾರಿ ರಂಗಸ್ವಾಮಿ ಸೇರಿದಂತೆ ಯುವ ಸ್ಪಂದನಾ ತಂಡ, ನೆಹರೂ ಯುವ ಕೇಂದ್ರ ತಂಡ, ಕ್ರೀಡಾ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಸಹ ಪ್ರಾಧ್ಯಾಪಕ ಚಂದ್ರಶೇಖರ ಬಿಳೇಗುಡ್ಡ ಕಾರ್ಯಕ್ರಮ ನಿರೂಪಿಸಿದರು. ರಂಗಸ್ವಾಮಿ ಕೊನೆಯಲ್ಲಿ ವಂದಿಸಿದರು.