ಹಜರತ್ ಟಿಪ್ಪು ಸುಲ್ತಾನ ಜಯಂತಿ : ನ. ೦೫ ರಂದು ಪೂರ್ವಾಭಾವಿ ಸಭೆ


ಕೊಪ್ಪಳ ನ.: : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆ ನ. ೦೫ ರಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನ. ೧೦ ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುವ ಸಂಬಂಧಿಸಿದ ಪೂರ್ವಭಾವಿ ಸಭೆಯನ್ನು ನ. ೦೫ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಎಲ್ಲಾ ಸಮಾಜದ ಮುಖಂಡರುಗಳು ಆಗಮಿಸುವಂತೆ ಅಪರ ಜಿಲ್ಲಾಧಿಕಾರಿ ಸಿ.ಡಿ ಗೀತಾ   ಕೋರಿದ್ದಾರೆ.