ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣ ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಕೊಪ್ಪಳ ಮೇ. 15: ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಕೊಪ್ಪಳ ವತಿಯಿಂದ ಸಿ.ಇ.ಟಿ ಪರೀಕ್ಷೆಯ ಮೂಲಕ ಆಯ್ಕೆಯಾದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಮಂಜೂರಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ವಿದ್ಯಾರ್ಥಿಗಳು `‘ಅರಿವು/ ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಯೋಜನೆಯಡಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ,ಪ್ರ-3ಎ ಮತ್ತು ಪ್ರ-ಬಿಗೆ ಸೇರಿದ್ದು, ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡೆಸಿದವರಾಗಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷಗಳ ಮಿತಿಯಲ್ಲಿರಬೇಕು.
ಹೀಗೆ ಅರ್ಜಿ ಸಲ್ಲಿಸಿ;
ಶೈಕ್ಷಣಿಕ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೇಂದ್ರ ಕಛೇರಿಯ ವೆಬ್‌ಸೈಟ್ ತಿತಿತಿ.ಏಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್‌ಸೈಟ್‌ನಲ್ಲಿ ಲಭ್ಯವಿರುವ useಡಿಟಿಚಿme-ಚಿಡಿivu ಮತ್ತು ಠಿಚಿssತಿಚಿಡಿಜ-ಚಿಡಿivu@123 ನ್ನು ನಮೂದಿಸಿ ಅರ್ಜಿಯನ್ನು ಆನ್‌ಲೈನ್‌ನಲ್ಲಿಯೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ. 24 ಕೊನೆಯ ದಿನವಾಗಿರುತ್ತದೆ. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಸಿ.ಇ.ಟಿ/ ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಕೆಟ್, ಈ ದಾಖಲೆಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ ಸಂಖ್ಯೆ. 8197249898/ 8095267253 ಅಥವಾ ಆಯಾ ನಿಗಮದ ಜಿಲ್ಲಾ ಕಛೇರಿಯಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವೆವಸ್ಥಾಪಕರು ತಿಳಿಸಿದ್ದಾರೆ.

Please follow and like us:
error

Related posts