ಹಿಂದುಳಿದ ವರ್ಗದವರಿಗೆ ವಿವಿಧ ಯೋಜನೆ : ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

devaraj-urs ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟಾಕ್ಸಿ/ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ಯೋಜನೆ ಹಾಗೂ ಹಿಂದುಳಿದ ವರ್ಗಗಳ ವಿಧವೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಯೋಜನೆಯಲ್ಲಿ ಸೌಲಭ್ಯ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟಾಕ್ಸಿ/ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ಯೋಜನೆ : ಹಿಂದುಳಿದ ವರ್ಗಗಳ ೧೦೦೦ ನಿರುದ್ಯೋಗಿ ಯುವಕರಿಗೆ ಶೇ.೫೦ ರಷ್ಟು ಟೂರಿಸ್ಟ್ ಟಾಕ್ಸಿ/ ಸರಕು ಸಾಗಾಣಿಕೆ ವಾಹನ ಖರೀದಿಸಲು ಗರಿಷ್ಠ ರೂ.೩ ಲಕ್ಷ ಅಥವಾ ವಾಹನದ ಶೇ.೫೦ ರಷ್ಟು ಇವುಗಳಲ್ಲಿ ಯಾವುದು ಕಡಿಮೆಯೊ ಅಷ್ಟು ಸಹಾಯಧನ ಮಂಜೂರು ಮಾಡಲಾಗುವುದು. ಉಳಿತ ಮೊತ್ತವನ್ನು ಬ್ಯಾಂಕ್ ಮೂಲಕ ಸಾಲದ ರೂಪದಲ್ಲಿಪಡೆಯಬಹುದು.
ವಿಧವೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು : ಹಿಂದುಳಿದ ವರ್ಗಗಳಿಗೆ ಸೇರಿದ ವಿಧವೆಯರಿಗೆ ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ರೂ. ೩೦೦೦೦/- ಗಳ ಸಾಲ ಹಾಗೂ ರೂ. ೧೦೦೦೦/- ಗಳ ಸಹಾಯಧನ ಹೀಗೆ ಒಟ್ಟು ರೂ. ೪೦೦೦೦/- ಗಳ ಸೌಲಭ್ಯ ಒದಗಿಸಲಾಗುವುದು.
ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತಿಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ). ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೪೦,೦೦೦/-ಗಳು, ಪಟ್ಟಣ ಪ್ರದೇಶದವರಿಗೆ ರೂ.೫೫,೦೦೦/-ಗಳ ಒಳಗಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು. ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು. ಟೂರಿಸ್ಟ್ ಟಾಕ್ಸಿ/ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ಯೋಜನೆಯಲ್ಲಿ ಅರ್ಜಿದಾರರು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು. ೧೮ ರಿಂದ ೪೦ ವರ್ಷಗಳ ವಯೋಮಿತಿಯಲ್ಲಿರಬೇಕು. ವಿಧವೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಯೋಜನೆಯಲ್ಲಿ ಅರ್ಜಿದಾರರು ೧೮ ರಿಂದ ೬೦ ವರ್ಷಗಳ ವಯೋಮಿತಿಯಲ್ಲಿರಬೇಕು. ವಿಧವೆಯಾಗಿರುವ ಬಗ್ಗೆ ಕಂದಾಯ ಅಧಿಕಾರಿಗಳು ನೀಡುತ್ತಿರುವ ಮಾಸಾಶನದ ಪ್ರಮಾಣ ಪತ್ರದ ದೃಢೀಕೃತ ಪ್ರತಿಯನ್ನು ಸಲ್ಲಿಸಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹ ಹಾಗೂ ಅವರ ಕುಂಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ತಾಲೂಕಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ <hಣಣಠಿ://ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ> ನಲ್ಲಿ ಅರ್ಜಿ ನಮೂನೆಗಳನ್ನು ಪಡೆದು. ಜೂ. ೨೪ ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್‌ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಏಕನಾತಪ್ಪ  ತಿಳಿಸಿದ್ದಾರೆ.

Please follow and like us:
error

Related posts

Leave a Comment