ಹಿರಿಯ ನಾಗರೀಕರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ : ಜ. ೧೦ ರಂದು ಅರಿವು-ನೆರವು ಕಾರ್ಯಕ್ರಮ

ಕೊಪ್ಪಳ ಜ.  ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನಿವೃತ್ತ ನೌಕರರ ಸಂಘ, ಸಿದ್ದೇಶ್ವರ ವಿದ್ಯಾಪೀಠ, ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ ಮತ್ತು ಹಗಲು ಯೋಗಕ್ಷೇಮ ಕೇಂದ್ರದ ವತಿಯಿಂದ “ಹಿರಿಯ ನಾಗರೀಕರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ” ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಜ. ೧೦ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ನ್ಯಾಯಾಲಯ ಆವರಣದ ಸಾಕ್ಷಿದಾರರ ಮೊಗಸಾಲೆ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಇಮಾಲಪ್ಪ, ಹಿರಿಯ ವಕೀಲ ವಿ.ಎಂ. ಭೂಸನೂರಮಠ, ಸಿದ್ದೇಶ್ವರ ವಿದ್ಯಾಪೀಠ ಅಧ್ಯಕ್ಷ ಶರಣಗೌಡ ಬಿರಾದಾರ, ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ವಿ. ಜಡಿಯವರ, ಕಾರ್ಯದರ್ಶಿ ಬಿ.ಎಫ್. ಬಿರನಾಯಕ ಪಾಲ್ಗೊಳ್ಳುವರು. ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ವಿಶೇಷ ಸರ್ಕಾರಿ ಅಭೀಯೋಜಕರಾದ ಗೌರಮ್ಮ ಎಲ್. ದೇಸಾಯಿ ಅವರು ಹಿರಿಯ ನಾಗರಿಕರ ಕಾಯ್ದೆ-೨೦೦೭ ಹಾಗೂ ಹಿರಿಯ ನಾಗರೀಕರ ನಿಯಮಗಳು-೨೦೦೯ರ ಕುರಿತು, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಇಮಾಲಪ್ಪ ಅವರು ಹಿರಿಯ ನಾಗರೀಕರಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡುವರು .

Please follow and like us:
error