ಹುಲಿಗೆಮ್ಮ ದೇವಿ ಜಾತ್ರೆ ರಥೋತ್ಸವ ರದ್ದು : ಪಿ.ಸುನೀಲ್ ಕುಮಾರ್

ಕೊಪ್ಪಳ ಮೇ. : ಕೋವಿಡ್-19, ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮೇ 15 ರಿಂದ 18 ರವರೆಗೆ ನಡೆಯಬೇಕಿದ್ದ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆಯ ರಥೋತ್ಸವ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಪ್ರಸ್ತುತ ನಿಯಮಗಳನ್ವಯ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆ ಮೂಲಕ ಕೋರಿದ್ದಾರೆ.

Please follow and like us:
error