ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ ಭೇಟಿ : ಪರಿಶೀಲನೆ


ಕೊಪ್ಪಳ ಮೇ. : ಕೊಪ್ಪಳ ತಾಲೂಕಿನ ಶಿವಪುರ ಗ್ರಾಮ ಪಂಚಾಯತಿ ಮತ್ತು ಹುಲಿಗಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಸಂಸದರಾದ ಸಂಗಣ್ಣ ಕರಡಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.  
ನಂತರ ಮಾತನಾಡಿದ ಅವರು ಕಾಮಗಾರಿಯಲ್ಲಿ ಸುಮಾರು 219 ಜನ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದು ಕೂಲಿಕಾರರಿಗೆ ಕೂಲಿ ಕೆಲಸ ನೀಡಿರುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಯೋಜನೆಯು ಕೂಲಿಕಾರರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರ ಒಳಿತಿಗಾಗಿ ಜಾರಿಗೆ ತಂದ ಯೋಜನೆಯಾಗಿದ್ದು ಎಲ್ಲರಿಗೂ ಬಹಳ ಪ್ರಯೋಜನವಾಗಿದೆ ಎಂದು ಹೇಳಿದರು.  
ವೈಯಕ್ತಿಕ ಕಾಮಗಾರಿ ಹಾಗೂ ಸಾಮೂಹಿಕ ಕಾಮಗಾರಿಗಳಲ್ಲಿ ತೊಡಗಿಸಿಕೊಂಡು ಯೋಜನೆಯ ಲಾಭವನ್ನು ಪಡೆಯಬೇಕೆಂದು ಹಾಗೂ ಕೊರೋನಾ ಕೋವಿಡ್-19 ಸಂದರ್ಭದಲ್ಲಿ ನಾವೆಲ್ಲರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ನಿರ್ದೇಶನಗಳನ್ನು ಪಾಲನೆ ಮಾಡಿ ನಮ್ಮ ಹಾಗೂ ಕುಟುಂಬದ ಮತ್ತು ಸಾರ್ವಜನಿಕರ ಜೀವವನ್ನು ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದರು.  
ಇದೇ ಸಂದರ್ಭದಲ್ಲಿ ಕೂಲಿಕಾರರಿಗೆ ಹೊಸ ಮಾದರಿಯ ಉದ್ಯೋಗ ಚೀಟಿ (ಜಾಬ್ ಕಾರ್ಡ), ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮಾಸ್ಕಗಳನ್ನು ವಿತರಿಸಿದರು.  
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೊಪ್ಪಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಈ ಯೋಜನೆಯ ಕುರಿತು ಎಲ್ಲರಿಗೂ ವಿಷಯವನ್ನು ಮನವರಿಕೆ ಮಾಡಿದರು. ಕೊಪ್ಪಳ ತಾಲೂಕಿನಲ್ಲಿ ಒಟ್ಟು 57,636 ಉದ್ಯೋಗ ಚೀಟಿಗಳನ್ನು ವಿತರಿಸಲಾಗಿರುತ್ತದೆ. ತಾಲೂಕಿನಲ್ಲಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿಹೊಂಡ, ನಾಲಾ ಹೂಳೆತ್ತುವುದು, ಚೆಕ್ ಡ್ಯಾಂ ಹೂಳೆತ್ತುವುದು ಸೇರಿದಂತೆ ಪ್ರತಿ ದಿನ ತಾಲೂಕಿನಲ್ಲಿ 9,380 ಕೂಲಿಕಾರರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 86,060 ದಿನಗಳನ್ನು ಸೃಜನೆ ಮಾಡಲಾಗಿದೆ. ರೈತರು ಗಮನಹರಿಸಿ ವೈಯಕ್ತಿಕ ಕಾಮಗಾರಿಗಳ ಕಡೆ ಗಮನಹರಿಸಬೇಕು ಎಂದು ಅವರು ತಿಳಿಸಿದರು.  
ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಪಾಲಾಕ್ಷಪ್ಪ ಗುಂಗಾಡಿ, ಶಿವಪುರ ಮತ್ತು ಹುಲಿಗಿ ಗ್ರಾಪಂ ಅಧ್ಯಕ್ಷರು, ಹುಲಿಗಿ ಪಿಡಿಒ ಸಜ್ಜನರ ಪ್ರಕಾಶ, ತಾಂತ್ರಿಕ ಸಹಾಯಕ ಇಂಜಿನಿಯರ್ ಮತ್ತು ಗ್ರಾಪಂ ಸದಸ್ಯರು, ಕಾಮಗಾರಿ ನಿರ್ವಹಿಸುವವರು ಹಾಗೂ ಗ್ರಾ.ಪಂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error