ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ 

ಕೊಪ್ಪಳ ಆ.: ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ, ಆರೋಗ್ಯ ಹಾಗೂ ಪರಿಸರ ಮಾಲಿನ್ಯವನ್ನು ಕಾಪಾಡುವ ದೃಷ್ಟಿಯಿಂದ ಹೆಚ್ಚಿನ ಶಬ್ಧ ಹೊರಸೂಸುವ ಧ್ವನಿವರ್ಧಕ ಸಾಧನ ಸಲಕರಣೆಗಳನ್ನು ಉಪಯೋಗಿಸುವುದನ್ನು ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ. 36, ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಗಳು- 2000 & ಪರಿಸರ ರಕ್ಷಣಾ ಕಾಯ್ದೆ- 1986 ರನ್ವಯ ಸೆಪ್ಟೆಂಬರ್. 01 ರಿಂದ 24 ರವರೆಗೆ ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು  ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Please follow and like us:
error