ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ :

: ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವಿಧ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ ರವರು ನಡೆಸುವ 10ನೇ ತರಗತಿ ಪರೀಕ್ಷೆಗಳಲ್ಲಿ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕ್ರಮವಾಗಿ ತಲಾ 7000/- ಮತ್ತು 15000/- ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರುರವರು ನಿರ್ದೇಶಿಸಿದ್ದು, 2018ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್-ಲೈನ್ ಮೂಲಕ ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ನೋಂದಣಿ ವಿವರಗಳನ್ನು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳ ಉಳಿತಾಯ ಖಾತೆಗಳ ವಿವರಗಳನ್ನು ಚಾಚೂ ತಪ್ಪಿಲ್ಲದಂತೆ ನೋಂದಣಿ ಮಾಡಿಸಿ, ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.