You are here
Home > Koppal News > ಹೈನುಗಾರಿಕೆ ತರಬೇತಿ : ಅರ್ಜಿ ಆಹ್ವಾನ

ಹೈನುಗಾರಿಕೆ ತರಬೇತಿ : ಅರ್ಜಿ ಆಹ್ವಾನ

: ಕೊಪ್ಪಳ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಆಸಕ್ತರಿಗೆ 30 ದಿನಗಳ ಉಚಿತ ಹೈನುಗಾರಿಕೆ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್. 19. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನ. 20 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು. ಹಾಗೂ ನ. 21 ರಿಂದ ತರಬೇತಿಗಳು ಪ್ರಾರಂಭಗೊಳ್ಳಲಿವೆ. ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ. 08539-231038, ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್‍ಸೆಟಿ ನಿರ್ದೇಶಕರು.

Top