ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಸೆ. ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
05 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚನ್ನಮ್ಮ ಪ್ರಶಸ್ತಿಯನ್ನು ನೀಡುವ ಸಲುವಾಗಿ ಕಲೆ, ಸಾಂಸ್ಕøತಿಕ, ಕ್ರೀಡೆ, ಸಮಾಜ ಸೇವೆ, ಸಂಗೀತ, ನಾವಿನ್ಯತೆ (ಇನ್ನೊವೇಷನ್) ತಾರ್ಕಿಕ (ಸ್ಕೊಲಸ್ಟೀಕ್) ಸಾಧನೆಗಳ ಮಾಡಿರುವ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಕರಣವು 2017ರ ಆಗಷ್ಟ ರಿಂದ 2018ರ ಜುಲೈ ತಿಂಗಳ ಒಳಗೆ ನಡೆದಿರಬೇಕು. ಪ್ರಶಸ್ತಿಗಾಗಿ ಜಿಲ್ಲಾ ಮಟ್ಟದಲ್ಲಿ ಪ್ರತಿಭೆಯನ್ನು ಗುರುತಿಸಿರಬೇಕು. ಈ ಬಗ್ಗೆ ದಿನ ಪತ್ರಿಕೆಗಳ ಪ್ರಕಟಣೆಯ ತುಣುಕುಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ನಿಗದಿತ ಅರ್ಜಿಯನ್ನು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪತ್ರಾಂಕಿತ ಅಧಿಕಾರಿಗಳಿಂದ ಧೃಢೀಕರಿಸಿ ಸೆ. 25 ರೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ .