ಹೊರ ರಾಜ್ಯಗಳಿಂದ ಬರುವ ಕಾರ್ಮಿಕರಿಗೆ ಸ್ಟಾö್ಯಂಪಿAಗ್ ಕಡ್ಡಾಯ : ಪಿ. ಸುನೀಲ್ ಕುಮಾರ್

ಕೊಪ್ಪಳ ಮೇ. ಹೊರ ರಾಜ್ಯಗಳಿಂದ ಬರುವ ಜಿಲ್ಲೆಯ ಕಾರ್ಮಿಕರನ್ನು ಚೆಕ್‌ಪೋಸ್ಟ್ಗಳಲ್ಲಿಯೇ ಆರೋಗ್ಯ ತಪಾಸಣೆ ಮಾಡಿ ಕಡ್ಡಾಯವಾಗಿ ಸ್ಟಾö್ಯಂಪಿAಗ್ ಮಾಡಿ ಕ್ವಾರಂಟೈನ್‌ನಲ್ಲಿ ಇಡುವಂತೆ ಕ್ರಮ ಕೈಗೊಳ್ಳುವುದು ಆಯಾ ವ್ಯಾಪ್ತಿಯ ತಹಶೀಲ್ದಾರರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ವಲಸೆ ಕಾರ್ಮಿಕರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೊರ ರಾಜ್ಯಗಳಿಂದ ಬಂದ ಕಾರ್ಮಿಕರು ರಾಜ್ಯದ ಬೇರೆ ಜಿಲ್ಲೆಯಿಂದ ಬಂದಿರುವುದಾಗಿ ಹೇಳಿ ಅವರ ಗ್ರಾಮಕ್ಕೆ ಹೋಗುವ ಸಾಧ್ಯತೆ ಇದ್ದು ಅಂತಹವರ ಕುರಿತು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ಜಿಲ್ಲೆಯ ಗಡಿಗಳಲ್ಲಿ ನಾಲ್ಕು ಕಡೆ ಸ್ಥಾಪಿಸಿರುವ ಚೆಕ್‌ಪೋಸ್ಟ್ಗಳಲ್ಲಿ ಆರೋಗ್ಯ ಸಿಬ್ಬಂದಿ, ಕಾಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹೊರ ರಾಜ್ಯದಿಂದ ಬರುವ ಬಸ್‌ಗಳಲ್ಲಿ ಬರುವ ಕಾರ್ಮಿಕರಿಗೆ ಸೂಕ್ತ ತಿಳುವಳಿಕೆ ನೀಡಿ ಕ್ವಾರಂಟೈನ್‌ಗೆ ಒಳಗಾಗಲು ಮನವೊಲಿಸಿ. ಸೇವಾ ಸಿಂಧು ಮೂಲಕ ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಜಿಲ್ಲೆಯ ನಾಗರಿಕರು ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇರಲು ಬಯಸಿದರೆ ಹೋಟೆಲ್ ವೆಚ್ಚವನ್ನು ಅವರೇ ಭರಿಸಬೇಕು. ಸರ್ಕಾರವು ಕ್ವಾರಂಟೈನ್ ಕುರಿತು ಹೊರಡಿಸಿದ ಹೊಸ ಸುತ್ತೋಲೆಯಲ್ಲಿ ಗರ್ಭಿಣಿಯರು,  ವಯಸ್ಸಾದವರು, ಚಿಕ್ಕಮಕ್ಕಳು ಕ್ವಾರಂಟೈನ್‌ಗೆ ಒಳಗಾದಲ್ಲಿ ಅವರನ್ನು ಅವರ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ವಿವಿಧ ಫ್ಯಾಕ್ಟರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರನ್ನು ಗುರುತಿಸಲಾಗಿದ್ದು, ಈಗಾಗಲೇ ಕಾಮಿಕರನ್ನು ಅವರ ಊರಿಗೆ ಕಳುಹಿಸಿಕೊಡುವ ಕಾಯ ಆರಂಭವಾಗಿದೆ. ಇದೇ ಮೇ 19 ರಂದು ಜಾರ್ಖಂಡ್‌ಗೆ ತೆರಳುವ ರೈಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 535 ಜಾರ್ಖಂಡ್ ರಾಜ್ಯದ ಕಾರ್ಮಿಕರನ್ನು ಕಳುಹಿಸಿಕೊಡಲಾಗುತ್ತಿದೆ. ಉತ್ತರ ಪ್ರದೇಶದ 776 ಕಾರ್ಮಿಕರನ್ನು ಮೇ 17 ಮತ್ತು 19 ರಂದು ತೆರಳುವ ರೈಲಿನಲ್ಲಿ ಅವರ ಊರಿಗೆ ಕಳುಹಿಸಿಕೊಡಲಾಗುವುದು. ಇವರನ್ನು ಹೊಸಪೇಟೆ ರೈಲು ನಿಲ್ದಾಣದಿಂದ ರೈಲಿನಲ್ಲಿ ಕಳುಹಿಸಬೇಕಾಗಿರುವುದರಿಂದ ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಜಿಲ್ಲೆಯಲ್ಲಿರುವ ಹೊರ ರಾಜ್ಯದ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಗೆ ಮಧ್ಯರಾತ್ರಿಯ ನಂತರ, ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಹೊರ ರಾಜ್ಯದಿಂದ ಜನರು ಆಗಮಿಸುತ್ತಿರುವುದು ಕಂಡುಬAದಿದೆ. ಆದ್ದರಿಂದ ಜಿಲ್ಲೆಯ ಗಡಿ ಭಾಗಗಳಲ್ಲಿ ಮತ್ತು ಇತರ ಚೆಕ್‌ಪೋಸ್ಟ್ಗಳಲ್ಲಿ ರಾತ್ರಿ ಪಾಳಿಯಲ್ಲಿ ಆಯಾ ವ್ಯಾಪ್ತಿಯ ತಹಶೀಲ್ದಾರರು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಗೆ ಆಗಮಿಸುವ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿಸಿ ಅವರನ್ನು ಗುರುತಿಸಲಾದ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಬೇಕು. ಮೇ 16 ರಂದು ಸುಮಾರು 200 ಜನ ಕಾರ್ಮಿಕರು ಸಿಂಧುದುರ್ಗದಿAದ ರೈಲಿನ ಮೂಲಕ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಆರೋಗ್ಯ ತಪಾಸಣೆಗೊಳಪಡಿಸಿ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಿಕೊಡಲು ಸೂಕ್ತ ವ್ಯವಸ್ಥೆಯನ್ನು ಸಂಬAಧಿಸಿದ ಅಧಿಕಾರಿಗಳು ಮಾಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಹಾಯಕ ಆಯುಕ್ತರಾದ ಸಿ.ಡಿ. ಗೀತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error