೭೧ನೇ ಗಣರಾಜ್ಯೋತ್ಸವ: ಜ. ೨೬ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ

ಕೊಪ್ಪಳ ಜ.   ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಜನವರಿ. ೨೬ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ೭೧ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಶರಣಪ್ಪ ಮಟ್ಟೂರು, ಡಾ. ಚಂದ್ರಶೇಖರ ಬಿ. ಪಾಟೀಲ, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ ಎನ್ ಭಾಗವಹಿಸುವರು. ಧ್ವಜಾರೋಹಣದ ನಂತರ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ, ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಘೂ ಗೃಹ ರಕ್ಷಕ ದಳದಿಂದ ಪಥಸಂಚಲನ ಹಾಗೂ ಗೌರವ ರಕ್ಷೆ ಸ್ವೀಕಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಗುವುದು. ಅಂದು ಸಂಜೆ ೦೬ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:
error

Related posts