​ಆ. 10 ರಂದು ಕುಷ್ಟಗಿಯಲ್ಲಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಿಗೆ ಕಾರ್ಯಾಗಾರ

ಕೊಪ್ಪಳ, ಆ. : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುನಿಸೇಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರುಗಳಿಗೆ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂರಕ್ಷಣೆ ಕುರಿತು ಕಾರ್ಯಾಗಾರವನ್ನು ಆ.10 ರಂದು ಬೆಳಿಗ್ಗೆ 10-00 ಗಂಟೆಗೆ ಕುಷ್ಟಗಿ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕುಷ್ಟಗಿ ಹಿರಿಯ ಪ್ರಧಾನ ಸಿವ್ಹಿಲ್ ನ್ಯಾಯಾಧೀಶರಾದ ಕುಲಕರ್ಣಿ ನರಹರಿ ಅವರು ಉದ್ಘಾಟಣೆ ನೆರೆವೇರಿಸುವರು.  ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀದೇವಿ ಗದ್ದನಕೇರಿ ಅವರು ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (ಪ್ರ) ವೀರೇಂದ್ರ ನಾವದಗಿ, ಕುಷ್ಟಗಿ ತಹಶೀಲ್ದಾರ ಎಂ. ಗಂಗಪ್ಪ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಂ. ಮೋಹನ, ಕ್ಷೇತ್ರ ಶಿಕ್ಷಣಾದಿಕಾರಿ ಎಂ.ಬಿ ಮೊರಟಗಿ, ಅರಕ್ಷಕ ನಿರೀಕ್ಷಕ ಸತೀಶ ತಳವಾಳ, ತಾಲೂಕು ವಕೀಲರ ಸಂಘದ ಅಧ್ಯಕ್ಷ ನಾಗಪ್ಪ ಆರ್. ಸೂಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೇಖರಗೌಡ ರಾಮತ್ನಾಳ, ಸದಸ್ಯರುಗಳಾದ ಮಹಾಲಿಂಗಪ್ಪ ದೋಟಿಹಾಳ ಹಾಗೂ ಹನುಮಂತಪ್ಪ ಬಿಜಕಲ್ಲ ಪಾಲ್ಗೊಳ್ಳುವರು. 

ಸಂಪನ್ಮೂಲ ವ್ಯಕ್ತಿಗಳಾಗಿ ಯುನಿಸೇಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ತರಬೇತಿ ಸಂಯೋಜಕರಾದ ಹರೀಶ ಜೋಗಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ, ಹಾಗೂ ಕುಷ್ಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಅಂಗನವಾಡಿ ಮೇಲ್ವಿಚಾರಕಿಯವರಾದ ಸರಸ್ವತಿ ಮಂಗಳೂರು ಅವರು ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸವನ್ನು ನೀಡದ್ದದ್ದಾದ್ದಾರದ್ದಾರೆದ್ದಾರದ್ದಾದ್ದದ್ದ್್ದ್ದ್್್ದ್್ದ್್ದ್್ದ್ದ್್್ದ್್ದ

Please follow and like us:
error