​ಕೊಪ್ಪಳ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

: ಕೊಪ್ಪಳ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ನಿಧಿಯ ವತಿಯಿಂದ ಪ್ರಸಕ್ತ ಸಾಲಿನ “ಜಿಲ್ಲಾ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ ಮತ್ತು ಪ್ರೌಢ ಶಾಲಾ ವಿಭಾಗದಿಂದ ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಗಾಗಿ ಆಯ್ಕೆಯಾದ ಶಿಕ್ಷಕರ ಪಟ್ಟಿ ಪ್ರಕಟಿಸಲಾಗಿದೆ.  
ಪ್ರಾಥಮಿಕ ಶಾಲಾ ವಿಭಾಗ :

 ಕೊಪ್ಪಳ ತಾಲೂಕು ಹಲವಾಗಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ವೆಂಕರೆಡ್ಡಿ ಬಿ., ಗಂಗಾವತಿ ತಾಲೂಕು ಕಾರಟಗಿಯ ಸರ್ಕಾರಿ ಕಿ.ಪ್ರಾ.ಶಾಲೆ ಸಹಶಿಕ್ಷಕ ತೋಟಯ್ಯ ಅಂಗಡಿ.  ಕುಷ್ಟಗಿ ತಾಲೂಕು ರಾಮ್‍ಜಿ ತಾಂಡಾದ ಸರ್ಕಾರಿ ಕಿ.ಪ್ರಾ.ಶಾಲೆ ಸಹಶಿಕ್ಷಕ ಶಂಕರ ಎಂ. ರಾಠೋಡ ಹಾಗೂ ಯಲಬುರ್ಗಾ ತಾಲೂಕು ಬೇವೂರಿನ ಸರ್ಕಾರಿ ಮಾದರಿಯ ಹಿ.ಪ್ರಾ.ಶಾಲೆ ಸಹಶಿಕ್ಷಕಿ ಹನಮವ್ವ ಕಡಗತ್ತಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗ : ಕೊಪ್ಪಳ ತಾಲೂಕಿನ ಭಾಗ್ಯನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಂಬಣ್ಣ ಕೊಪ್ಪರದ, ಗಂಗಾವತಿ ತಾಲೂಕಿನ ಉಡುಮಕಲ್ ಸರಕಾರಿ ಪ್ರೌಢ ಶಾಲೆಯ ಕೋಟೆ ಮೇಗಳ ರಮೇಶ, ಕುಷ್ಟಗಿ ತಾಲೂಕಿನ ಜುಮಲಾಪುರ ಸರಕಾರಿ ಪ್ರೌಢ ಶಾಲೆಯ ಚಿದಾನಂದಪ್ಪ ಮಲ್ಲಪ್ಪ ಕಂದಗಲ್ ಹಾಗೂ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಹನುಮಂತಪ್ಪ ಹೆಚ್. ಆವರದಮನಿ ಅವರನ್ನು ಪ್ರೌಢ ಶಾಲಾ ವಿಭಾಗದಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಆಯ್ಕೆಯಾಗಿದ್ದಾರೆ.

       ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಸೆ. 05 ರಂದು ಕೊಪ್ಪಳದ ಜಿಲ್ಲಾ ಆಡಿಟೋರಿಯಂ ಹಾಲ್‍ನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Please follow and like us:
error