You are here
Home > Koppal News > ​ಕೊಪ್ಪಳ ಜಿಲ್ಲೆಯಲ್ಲಿ ಆ. 09 ರಿಂದ ಬಯಲು ಬಹಿರ್ದೆಸೆ ಮುಕ್ತ ಸ್ವಾತಂತ್ರ್ಯ ಸಪ್ತಾಹ ಆಚರಣೆ

​ಕೊಪ್ಪಳ ಜಿಲ್ಲೆಯಲ್ಲಿ ಆ. 09 ರಿಂದ ಬಯಲು ಬಹಿರ್ದೆಸೆ ಮುಕ್ತ ಸ್ವಾತಂತ್ರ್ಯ ಸಪ್ತಾಹ ಆಚರಣೆ

ಕೊಪ್ಪಳ  : ಕೊಪ್ಪಳ ಜಿಲ್ಲೆಯಲ್ಲಿ 
ಪ್ರಸಕ್ತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ. 09 ರಿಂದ 15 ರವರೆಗೆ ಬಯಲು ಬಹಿರ್ದೆಸೆ ಮುಕ್ತ ಸ್ವಾತಂತ್ರ್ಯ ಸಪ್ತಾಹವನ್ನು ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.

  ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು 71 ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಆ. 09 ರಿಂದ 15 ರವರೆಗೆ ಬಯಲು ಬಹಿರ್ದೆಸೆ ಮುಕ್ತ (ಖುಲೆ ಮೆ ಶೌಚ್ ಸೆ ಆಜಾದಿ) ಸ್ವಾತಂತ್ರ್ಯ ಸಪ್ತಾಹವನ್ನು ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಚರಿಸುವ ಮೂಲಕ ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವಂತೆ ಹಾಗೂ ಪ್ರತಿಯೊಂದು ಗ್ರಾಮವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡಲು ವಿಶೇಷ ನೈರ್ಮಲ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚನೆ ನೀಡಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವೈವಿಧ್ಯಮ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.  ಆ. 09 ರಂದು ಕಾರ್ಯಕ್ರಮಕ್ಕೆ ಗ್ರಾ.ಪಂ. ಮಟ್ಟದಲ್ಲಿ ಚಾಲನೆ ದೊರೆಯಲಿದೆ.  ಆ. 10 ರಂದು ವಿಶೇಷ ಗ್ರಾಮ ಸಭೆ ಆಯೋಜಿಸಲಾಗುವುದು.  ಅಲ್ಲದೆ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದುಇ.  ಅಲ್ಲದೆ ಸಪ್ತಾಹದಲ್ಲಿ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವಂತಹ ರ್ಯಾಲಿ, ಜನಾಂದೋಲನ ಕಾರ್ಯಕ್ರಮಗಳು, ಜಾಥಾ ಆಯೋಜನೆ, ಮ್ಯಾರಥಾನ್ ಓಟ, ಶೌಚಾಲಯಗಳ ನಿರ್ಮಾಣ ಮತ್ತು ಬಳಕೆ ಅಭಿಯಾನ, ಶಾಲಾ ಕಾಲೇಜುಗಳಲ್ಲಿ ನೈರ್ಮಲ್ಯ ಕುರಿತು ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಭಾಷಣ ಮತ್ತು ಕ್ರೀಡಾ ಸ್ಪರ್ಧೆ ಇತ್ಯಾದಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.

Top