​ಜು. 20 ರಂದು ಪತ್ರಿಕಾ ದಿನಾಚರಣೆ ಹಾಗೂ 35ನೇ ರಾಜ್ಯ ಪತ್ರಕರ್ತರ ಸಮ್ಮೆಳದ ಪೂರ್ವಭಾವಿ ಸಭೆ

ಕೊಪ್ಪಳ ಜು. : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಕೊಪ್ಪಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಾಗೂ 35ನೇ ರಾಜ್ಯ ಪತ್ರಕರ್ತರ ಸಮ್ಮೆÃಳನ ಕುರಿತು ಪೂರ್ವಭಾವಿ ಸಭೆಯನ್ನು ಜುಲೈ. 20 ರಂದು ಮಧ್ಯಾಹ್ನ 02-30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 

ಕರ್ನಾಟಕ ಸರ್ಕಾರದ ಸಂಸದೀಯ ಕಾರ್ಯದರ್ಶಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸುವರು.  ಸಂಸದ ಸಂಗಣ್ಣ ಕರಡಿ ಸಾಧಕ ಪತ್ರಕರ್ತರಿಗೆ ಸನ್ಮಾನಿಸುವರು.  ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಕೆ.ಯು.ಡಬ್ಲೂö್ಯ.ಜೆ. ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರುರವರು ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ, ಜಿಲ್ಲಾ ವಾರ್ತಾಧಿಕಾರಿ ಧನಂಜಯ ಬಿ., ಕೆ.ಯು.ಡಬ್ಲೂö್ಯ.ಜೆ. ರಾಜ್ಯ ಉಪಾಧ್ಯಕ್ಷರಾದ ಮತ್ತಿಕೆರೆ ಜಯರಾಮ್ ಹಾಗೂ ಪುಂಡಲೀಕ ಬಾಳೋಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಕಾರ್ಯದರ್ಶಿಗಳಾದ ಸಂಜೀವರಾವ್ ಕುಲಕರ್ಣಿ ಹಾಗೂ ಬಂಗ್ಲೆ ಮಲ್ಲಿಕಾರ್ಜುನ, ಖಚಾಂಚಿ ಡಾ. ಕೆ.ಉಮೇಶ್ವರ ಪಾಲ್ಗೊಳ್ಳುವರು.  
ದೆಹಲಿ ಐ.ಎಫ್.ಡಬ್ಲೂö್ಯ.ಜೆ. ಸದಸ್ಯ ವಿ.ಆರ್. ತಾಳಿಕೋಟಿ, ಕೆ.ಯು.ಡಬ್ಲೂö್ಯ.ಜೆ. ರಾಜ್ಯ ಕಾರ್ಯಕಾರಣಿ ಸದಸ್ಯ ಜಿ.ಎಸ್. ಗೋನಾಳ, ರಾಜ್ಯ ನಾಮಕರಣ ಸದಸ್ಯ ಹರೀಶ ಹೆಚ್.ಎಸ್., ಸಮ್ಮೆÃಳನದ ಕಾರ್ಯನಿರ್ವಹಣಾ ಉಪಸಮಿತಿ ಅಧ್ಯಕ್ಷ ಸಿರಾಜ್ ಬಿಸರಳ್ಳಿ, ಪತ್ರಿಕಾ ಭವನ ನಿರ್ಮಾಣ ಉಪಸಮಿತಿ ಅಧ್ಯಕ್ಷ ಸಿದ್ದನಗೌಡ ಪಾಟೀಲ ಸೇರಿದಂತೆ ಕೆ.ಯು.ಡಬ್ಲೂö್ಯ.ಜೆ. ಕೊಪ್ಪಳ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಣಿ ಸದಸ್ಯರು, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ ಹಾಗೂ ಕುಕನೂರ ತಾಲೂಕುಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.  

Please follow and like us:
error