​ಸೈಕಲ್‌ ಸದುಪಯೋಗಪಡಿಸಿಕೊಳ್ಳಬೇಕು- ಗವಿಸಿದ್ದಪ್ಪ ಕರಡಿ.

ಕೊಪ್ಪಳ ಶಾಲಾ ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಸೈಕಲ್, ಪೌಷ್ಠಿಕ ಹಾಲು, ಸಮವಸ್ತ್ರ,ಶೂ, ಉಚಿತ ಪಠ್ಯಪುಸ್ತಕಗಳು ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದೆ ವಿದ್ಯಾರ್ಥಿಗಳು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಲೇಬಗೇರಾ ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ ಹೇಳಿದರು.
ಅವರು ಶುಕ್ರವಾರದಂದು ತಾಲೂಕಿನ ಮಾದಿನೂರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಸಮಯಕ್ಕೆ ಅನುಗುಣವಾಗಿ ಶಾಲೆಗೆ ತಲುಪಲು ಸೈಕಲ್ ಸಹಾಯಕಾರಿಯಾಗಿದೆ ಉತ್ತಮವಾಗಿ ಅಭ್ಯಸಿಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತಂದು ತಂದೆ-ತಾಯಿಗಳಿಗೆ ಶಿಕ್ಷಕರಿಗೆ ಕೀರ್ತಿ ತರಬೇಕು ಎಂದರು.
ಈ ಸಂದರ್ಭದಲ್ಲಿ ಮಾದಿನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮರಿಯಪ್ಪ, ತಾಲೂಕಾ ಪಂಚಾಯತ್ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮೀ ಅಬ್ಬಿಗೇರಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪಾಲಕರು, ಪೋಷಕರು ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

Related posts

Leave a Comment