Breaking News
Home / Koppal News / ​ ಕೊಪ್ಪಳದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

​ ಕೊಪ್ಪಳದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಅವರ ಜಯಂತಿ ಕಾರ್ಯಕ್ರಮ ಜ. 30 ರಂದು ಕೊಪ್ಪಳದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

  ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಅಂಗವಾಗಿ ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ 09 ಗಂಟೆಗೆ ಕೊಪ್ಪಳ ಗವಿಮಠ ಆವರಣದಿಂದ ಹೊರಡಲಿದೆ.  ಮೆರವಣಿಗೆಯು ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮಾರ್ಗವಾಗಿ ಮಹಾಂತಯ್ಯನಮಠ ಕಲ್ಯಾಣ ಮಂಟಪದವರೆಗೆ ಸಾಗಿ ಬರಲಿದೆ.  ವೇದಿಕೆಯ ಸಮಾರಂಭ ಬೆಳಿಗ್ಗೆ 11-30 ಗಂಟೆಗೆ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್,  ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಕೊಪ್ಪಳ ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಹೊಸಪೇಟೆಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್. ಶಿವಾನಂದ ಅವರು ವಿಶೇಷ ಉಪನ್ಯಾಸ ನೀಡುವರು.

About admin

Leave a Reply

Scroll To Top