You are here
Home > Koppal News > 01 ರಂದು ಕೊಪ್ಪಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

01 ರಂದು ಕೊಪ್ಪಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

.
ಕೊಪ್ಪಳ ಸೆ. 28 ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಹಿರಿಯ ನಾಗರೀಕರ ಕ್ಷೇತ್ರದ ಸೇವಾನಿರತ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಕಾರ್ಯಕ್ರಮವನ್ನು ಅಕ್ಟೋಬರ್. 01 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ನೌಕರರ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದೆ. 
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನುಪಾಟಿ ವಿಜಯಲಕ್ಷ್ಮೀ ಪ್ರಭಾಕರ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಂಡೂರು ಹನುಮಂತಗೌಡ ಪಾಟೀಲ್, ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Top