fbpx

05 ಲೀ. ಸೀಮೆಎಣ್ಣೆ : ಪರಿಷ್ಕøತ ಆದೇಶ ಜಾರಿ

ಕೊಪ್ಪಳ : ಪಡಿತರ ವ್ಯವಸ್ಥೆಯಲ್ಲಿ ಜನವರಿ ಮಾಹೆಗೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ಮೂರು ಮತ್ತು ಮೂರಕ್ಕಿಂತ ಮೇಲ್ಪಟ್ಟ ಸದಸ್ಯರನ್ನು ಹೊಂದಿರುವ ಅಂತ್ಯೋದಯ ಹಾಗೂ ಬಿಪಿಎಲ್ ಅನಿಲರಹಿತ ಪಡಿತರ ಚೀಟಿಗಳಿಗೆ 05 ಲೀ. ಸೀಮೆಎಣ್ಣೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.     ಈ ಮೊದಲು ಜನವರಿ ಮಾಹೆಗೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ಮೂರು ಮತ್ತು ಮೂರಕ್ಕಿಂತ ಮೇಲ್ಪಟ್ಟ ಸದಸ್ಯರನ್ನು ಹೊಂದಿರುವ ಅಂತ್ಯೋದಯ ಹಾಗೂ ಬಿಪಿಎಲ್ ಅನಿಲರಹಿತ ಪಡಿತರ ಚೀಟಿಗಳಿಗೆ 04 ಲೀ. ಸೀಮೆಎಣ್ಣೆ ಹಂಚಿಕೆ ಮಾಡಿ, ಜ.02 ರಂದು ಆದೇಶ ಹೊರಡಿಸಲಾಗಿತ್ತು.  ಇದೀಗ ಈ ಆದೇಶವನ್ನು ಪರಿಷ್ಕರಿಸಲಾಗಿದ್ದು, 5 ಲೀಟರ್ ಬಿಡುಗಡೆ ಮಾಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಜನೇವರಿ ಮಾಹೆಗೆ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ 3 ಮತ್ತು ಮೂರಕ್ಕಿಂತ ಮೇಲ್ಪಟ್ಟ ಅಂತ್ಯೋದಯ ಹಾಗೂ ಬಿಪಿಎಲ್ ಅನಿಲ ರಹಿತ ಪಡಿತರ ಚೀಟಿದಾರರು ತಮ್ಮ ಕಾರ್ಡ್‍ಗಳಿಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಕಾರರು/ಸೀಮೆಎಣ್ಣೆ ವಿತರಕರಿಂದ ಕಡ್ಡಾಯವಾಗಿ 5 ಲೀಟರ್ ಸೀಮೆ ಎಣ್ಣೆ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Please follow and like us:
error

Leave a Reply

error: Content is protected !!