You are here
Home > Koppal News > ಆ. 08 ರಂದು ಯಲಬುರ್ಗಾದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ

ಆ. 08 ರಂದು ಯಲಬುರ್ಗಾದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ

 ಯಲಬುರ್ಗಾ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜೆಎಸ್‍ಡಬ್ಲ್ಯೂ ಫೌಂಡೇಶನ್, ತೋರಣಗಲ್ಲು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರಿ ಚಿಕಿತ್ಸೆ ಶಿಬಿರ ಆ. 08 ರಂದು ಬೆಳಿಗ್ಗೆ 10 ಗಂಟೆಗೆ ಯಲಬುರ್ಗಾದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜರುಗಲಿದೆ.
  ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಶಿಬಿರದ ಉದ್ಘಾಟನೆ ನೆರವೇರಿಸುವರು.  ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ, ಜಿಂದಾಲ್‍ನ ಸಂಜೀವಿನಿ ಆಸ್ಪತ್ರೆ ಮುಖ್ಯಸ್ಥ ಡಾ. ಶ್ರೀಧರ ರೆಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಜೆಎಸ್‍ಡಬ್ಲ್ಯೂ ಫೌಂಡೇಶನ್ನಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಿ.ಎಸ್. ಕೇದಾರ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಆ. 09 ರಂದು ಹಿರೇವಂಕಲಕುಂಟಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ .

Leave a Reply

Top