ಐಎಎಸ್/ಐಪಿಎಸ್ ಪರೀಕ್ಷೆ : ಪೂರ್ವಭಾವಿ ತರಬೇತಿಗೆ ಆ. 10 ರಂದು ಆಯ್ಕೆ ಪರೀಕ್ಷೆ

 ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐಎಎಸ್/ಐಪಿಎಸ್ ಪರೀಕ್ಷಾ ಪೂರ್ವ ತರಬೇತಿಗಾಗಿ ಆಯ್ಕೆ ಮಾಡಲು ಪ್ರವೇಶ ಪರೀಕ್ಷೆ ಆ. 10 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ನಡೆಯಲಿದೆ.
  ಐಎಎಸ್/ಐಪಿಎಸ್ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ, ಬೆಂಗಳೂರು ಇಲ್ಲಿ ರಾಜ್ಯದ ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳನ್ನು ಪೂರ್ವಭಾವಿ ತರಬೇತಿಗಾಗಿ ಆನ್‍ಲೈನ್ ಮೂಲಕ ಈ ಹಿಂದೆ ಅರ್ಜಿ ಆಹ್ವಾನಿಸಲಾಗಿತ್ತು.  ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಆ. 10 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಪ್ಪಳದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಭ್ಯರ್ಥಿಗಳು, ಪ್ರವೇಶ ಪತ್ರವನ್ನು ತಪ್ಪದೆ ಹಾಜರುಪಡಿಸಬೇಕು.  ಹೆಚ್ಚಿನ ವಿವರಗಳನ್ನು ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪಿ. ಶುಭಾ ತಿಳಿಸಿದ್ದಾರೆ.

Leave a Reply