11ರಂದು ಜಿಲ್ಲೆಗೆ ಸಚಿವ ವಿ. ಸೋಮಣ್ಣ ,ಜು. ೧೨ ರಂದು ಸಚಿವ ವಿ.ಎಸ್. ಆಚಾರ್ಯ ಬೇಟಿ


ಕೊಪ್ಪಳ ಜು. ೮ (ಕ.ವಾ): ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಅವರು ಜು. ೧೧ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವ ವಿ. ಸೋಮಣ್ಣ ಅವರು ಅಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಕೊಪ್ಪಳ ನಗರಸಭೆ ವ್ಯಾಪ್ತಿಯ ಗುನ್ನಳ್ಳಿ ಮತ್ತು ಹೊರತಟ್ನಾಳ ಗ್ರಾಮದಲ್ಲಿ ೧೨೭೨ ನಿವೇಶನ ರಹಿತರಿಗೆ ಹಕ್ಕುಪತ್ರಗಳ ವಿತರಣೆ ಮತ್ತು ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ಕೊಪ್ಪಳ ನಗರಸಭೆ ವ್ಯಾಪ್ತಿಯ ಹೂವಿನಾಳ ಗ್ರಾಮದಲ್ಲಿ ೮೧೭ ನಿವೇಶನ ರಹಿತರಿಗೆ ಹಕ್ಕುಪತ್ರಗಳ ವಿತರಣೆ ಮತ್ತು ಕಾಮಗಾರಿ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು. ತರುವಾಯ ಕೊಪ್ಪಳ ವಿಧಾನಸಭಾ ಕ್ಷೇತ್ರದ ೬೦೦೦ ವಸತಿರಹಿತರಿಗೆ ಬಸವ ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಲು ಕಾಮಗಾರಿ ಆದೇಶ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಜು. ೧೨ ರಂದು ಸಚಿವ ವಿ.ಎಸ್. ಆಚಾರ್ಯ ಕೊಪ್ಪಳ ಜಿಲ್ಲೆಗೆ

ಕೊಪ್ಪಳ ಜು. ೮ (ಕ.ವಾ): ರಾಜ್ಯ ಉನ್ನತ ಶಿಕ್ಷಣ, ಯೋಜನೆ, ಸಾಂಖ್ಯಿಕ, ಮುಜರಾಯಿ ಮತ್ತು ಐಟಿ-ಬಿಟಿ ಸಚಿವ ಡಾ. ವಿ.ಎಸ್. ಆಚಾರ್ಯ ಅವರು ಜು. ೧೨ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವ ವಿ.ಎಸ್. ಆಚಾರ್ಯ ಅವರು ಜು. ೧೨ ರಂದು ಬೆಳಿಗ್ಗೆ ೮-೪೫ ಗಂಟೆಗೆ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸುವರು. ಬೆಳಿಗ್ಗೆ ೧೦-೩೦ ಗಂಟೆಗೆ ಗಂಗಾವತಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ನಂತರ ಗಂಗಾವತಿಯಲ್ಲಿ ಏರ್ಪಡಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧-೧೫ ಗಂಟೆಗೆ ಯಲಬುರ್ಗಾ ತಾಲೂಕು ಕುಕನೂರಿನಲ್ಲಿ ವಿದ್ಯಾನಂದ ಗುರುಕುಲದಲ್ಲಿ ಏರ್ಪಡಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Please follow and like us:
error