ಜ.13 ರಂದು ಅಲ್ಪಸಂಖ್ಯಾತರ ಜನಾಂಗದವರಿಗೆ ಮಾಹಿತಿ ಕಾರ್ಯಾಗಾರ

ಜಿಲ್ಲಾ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಜನಾಂಗದವರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಜ.13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆಡಳಿತ ಭವನದಲ್ಲಿನ ಮೌಲಾನ ಅಜಾದ್ ಅಲ್ಪಸಂಖ್ಯಾತರ ಭವನ (ಮಾಹಿತಿ ಕೇಂದ್ರ) ದಲ್ಲಿ ಹಮ್ಮಿಕೊಂಡಿದೆ.
ಕಾರ್ಯಾಗಾರದಲ್ಲಿ ಅಲ್ಪಸಂಖ್ಯಾತರ ಜನಾಂಗಕ್ಕೆ ಸೇರಿದ ಸಾರ್ವಜನಿಕರು ಭಾಗವಹಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೌಲಭ್ಯಗಳ/ಕಾರ್ಯಕ್ರಮಗಳ ಕುರಿತಂತೆ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಲ್ಲೇಶ್  ತಿಳಿಸಿದ್ದಾರೆ

Leave a Reply