ನ.14ರಿಂದ ಸಹಕಾರಿ ಸಪ್ತಾಹ

ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ಕೊಪ್ಪಳ ಹಾಗೂ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನವಂಬರ್ 14ರಿಂದ 20ರವರೆಗೆ 57ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತದೆ.
ನವಂಬರ್ 14ರಂದು ಆರಂಭವಾಗುವ ಸಹಕಾರಿ ಸಪ್ತಾಹದ ಆರಂಭದಲ್ಲಿ ಕಾರಟಿಯಲ್ಲಿ ನಡೆಯಲಿದ್ದು ಮಾಜಿ ಸಚಿವ ನಾಗಪ್ಪ ಸಾಲೋಣಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರ ಯುನಿಯನ್ ನ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರಿ ರಂಗದ ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply