ಅ. 15 ರಂದು ಕೊಪ್ಪಳಕ್ಕೆ ಸಚಿವೆ ಉಮಾಶ್ರೀ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಉಮಾಶ್ರೀ ಅವರು ಅ.15 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.    ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಛೇರಿಗೆ ಭೇಟಿ ನೀಡುವರು, ಬೆ.11 ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಂಟಿ ನಿರ್ದೇಶಕರು, ಸ್ತ್ರೀಶಕ್ತಿ ವಿಭಾಗ, ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಸಚಿವರು ಅದೇ ದಿನ ಮಧ್ಯಾಹ್ನ 2.00 ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ

Leave a Reply