ಆ.15 ರಂದು ಮುನಿರಾಬಾದ್,ಹೊಸಲಿಂಗಾಪೂರ, ಕವಲೂರು ಬಸ್ ನಿಲ್ದಾಣ ಉದ್ಘಾಟನೆ

 ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಿಂದ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದ ಉದ್ಘಾಟನೆ ಆ.15 ರಂದು ಬೆಳಿಗ್ಗೆ 12 ಗಂಟೆಗೆ ಮುನಿರಾಬಾದ್‍ನಲ್ಲಿ ನಡೆಯಲಿದೆ.
ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ಜ್ಯೋತಿ ಬೆಳಗಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. 
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ.ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ, ಜಿ.ಪಂ.ಸದಸ್ಯ ಕೆ.ರಮೇಶ ಹಿಟ್ನಾಳ, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ವಿಜಯಕುಮಾರ ಎಂ.ಪಾಟೀಲ್, ತಾ.ಪಂ. ಉಪಾಧ್ಯಕ್ಷೆ ಅಳವಂಡಿ ಕರಡಿ ಮುದ್ದವ್ವ, ತಾ.ಪಂ.ಸದಸ್ಯೆ ಬಾನು ಚಂದುಸಾಬ್, ಮುನಿರಾಬಾದ್ ಗ್ರಾ.ಪಂ. ಅಧ್ಯಕ್ಷೆ ರಾಧಿಕಾ ಎಸ್.ರವಿ, ಉಪಾಧ್ಯಕ್ಷ ಸಾಧಿಕ್ ಮೆಹಮೂಬ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ಜಿ.ಪಾರ್ಥಸಾರಥಿ   ತಿಳಿಸಿದ್ದಾರೆ. 
ಆ.15 ರಂದು ಹೊಸಲಿಂಗಾಪೂರ ಬಸ್ ನಿಲ್ದಾಣ ಉದ್ಘಾಟನೆ
 ಕೊಪ್ಪಳ ತಾಲೂಕಿನ ಹೊಸಲಿಂಗಾಪೂರ ಗ್ರಾಮದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಿಂದ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದ ಉದ್ಘಾಟನೆ ಆ.15 ರಂದು ಬೆಳಿಗ್ಗೆ 12.30 ಗಂಟೆಗೆ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಲಿದೆ. 
ನೂತನ ನಿಲ್ದಾಣದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ಜ್ಯೋತಿ ಬೆಳಗಿಸಲಿದ್ದು, ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. 
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ.ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ, ಜಿ.ಪಂ.ಸದಸ್ಯ ಕೆ.ರಮೇಶ ಹಿಟ್ನಾಳ, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ವಿಜಯಕುಮಾರ ಎಂ.ಪಾಟೀಲ್, ತಾ.ಪಂ.ಉಪಾಧ್ಯಕ್ಷೆ ಅಳವಂಡಿ ಕರಡಿ ಮುದ್ದವ್ವ, ತಾ.ಪಂ.ಸದಸ್ಯೆ ಜೆ.ರಾಧಿಕಾ ಜಗನ್ನಾಥ, ಹೊಸಳ್ಳಿ ಗ್ರಾ.ಪಂ.ಅಧ್ಯಕ್ಷೆ ಖತಿಜಾಬಿ ಮಹ್ಮದ್‍ಗೌಸ್, ಉಪಾಧ್ಯಕ್ಷ ಆರ್.ಬಸವರಾಜ ಕಂಬಳಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವರು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ಜಿ.ಪಾರ್ಥಸಾರಥಿ ಅವರು ತಿಳಿಸಿದ್ದಾರೆ.
ಆ.15 ರಂದು ಕವಲೂರು ಬಸ್ ನಿಲ್ದಾಣ ಉದ್ಘಾಟನೆ

ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಿಂದ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದ ಉದ್ಘಾಟನೆ ಸಮಾರಂಭವನ್ನು ಆ.15 ರಂದು ಮಧ್ಯಾಹ್ನ 3.30 ಗಂಟೆಗೆ ಬಸ್ ನಿಲ್ದಾಣದ ಆವರಣದಲ್ಲಿ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ಜ್ಯೋತಿ ಬೆಳಗಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. 
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ.ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ, ಜಿ.ಪಂ.ಸದಸ್ಯ ನಾಗನಗೌಡ ಎಂ.ಪಾಟೀಲ್, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ವಿಜಯಕುಮಾರ ಎಂ.ಪಾಟೀಲ್, ತಾ.ಪಂ. ಉಪಾಧ್ಯಕ್ಷೆ ಅಳವಂಡಿ ಕರಡಿ ಮುದ್ದವ್ವ, ತಾ.ಪಂ.ಸದಸ್ಯೆ ಜ್ಯೋತಿ ಮಲ್ಲಿಕಾರ್ಜುನ, ಕವಲೂರು ಗ್ರಾ.ಪಂ. ಅಧ್ಯಕ್ಷ ಮಲ್ಲಪ್ಪ ದೊಡ್ಡಹುಚ್ಚಪ್ಪ ಬೂತಣ್ಣವರ, ಉಪಾಧ್ಯಕ್ಷೆ ಮಲ್ಲಮ್ಮ ಹಳ್ಳಿ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ಜಿ.ಪಾರ್ಥಸಾರಥಿ ಅವರು ತಿಳಿಸಿದ್ದಾರೆ.
Please follow and like us:
error