ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ : ಜ.18 ರಂದು ಲಿಖಿತ ಪರೀಕ್ಷೆ

ಕೊಪ್ಪಳ ಜ.): ಪೊಲೀಸ್ ಇಲಾಖೆಯಿಂದ ಪ್ರಸಕ್ತ ಸಾಲಿನ ನಾಗರಿಕ/ಮಹಿಳಾ ಪೊಲೀಸ್ ಕಾನ್ಸ್‍ಟೇಬಲ್ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಮರು ಲಿಖಿತ ಪರೀಕ್ಷೆಯನ್ನು ಜ.18 ರ ಭಾನುವಾರ ಬೆಳಿಗ್ಗೆ 11 ರಿಂದ ಮ.12.30 ರವರೆಗೆ ಕೊಪ್ಪಳ ನಗರದ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.ಕೊಪ್ಪಳದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂಲ್ ನಂಬರ್ 5240001 ರಿಂದ 5240440 ರವರೆಗಿದ್ದು, ಒಟ್ಟು 440 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದೇ ರೀತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೂಲ್ ನಂಬರ್ 5240441 ರಿಂದ 5240765 ರವರೆಗಿದ್ದು, ಒಟ್ಟು 325 ಅಭ್ಯರ್ಥಿಗಳು ಸೇರಿದಂತೆ ಒಟ್ಟು 765 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ, ದೈಹಿಕ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳು, ಕರೆಪತ್ರಗಳನ್ನು ಇಲಾಖೆಯ ವೆಬ್‍ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳಬಹುದಾಗಿದೆ. ಲಿಖಿತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾದ ಪರೀಕ್ಷಾ ಕೇಂದ್ರದ ವಿವರಗಳನ್ನು ಸಹ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಕರೆಪತ್ರವನ್ನು ಪಡೆಯದಿರುವವರಿಗೆ ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ಕರೆಪತ್ರದ ಜೊತೆಗೆ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯ ಉತ್ತೀರ್ಣರಾದ ಫಲಿತಾಂಶ ಪತ್ರ ಹಾಗೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.ಅಭ್ಯರ್ಥಿಗಳಿಗೆ ಸೂಚನೆ : ಜ.18 ರಂದು ನಾಗರಿಕ/ಮಹಿಳಾ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಯ ಮರು ಲಿಖಿತ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಸೂಚನೆ ನೀಡಿದ್ದು, ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ. ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲೀ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರಿತೋಷಕ/ಕಾಣಿಕೆ ನೀಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಅಥವಾ ವದಂತಿಗಳಿಗೆ ಮಾರು ಹೋಗಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪಿ. ರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply