ಆ.20 ರಂದು ದಿ|| ದೇವರಾಜ ಅರಸು ಜನ್ಮ ದಿನಾಚರಣೆ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ರವರ 99ನೇ ಜನ್ಮ ದಿನಾಚರಣೆ ಸಮಾರಂಭ ಆ.20 ರಂದು ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ಜರುಗಲಿದೆ.
 ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್.ಆಂಜಿನೇಯ, ಜಿ.ಪಂ. ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ತೋಟದ, ಕೊಪ್ಪಳ ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಮ್ಮ ಮಾಲಿಪಾಟೀಲ್, ನಗರಸಭೆ ಅಧ್ಯಕ್ಷ ಲತಾ ವೀರಣ್ಣ ಸಂಡೂರು, ತಾ.ಪಂ. ಉಪಾಧ್ಯಕ್ಷೆ ಮುದ್ದಮ್ಮ ರಂಗಪ್ಪ ಕರಡಿ, ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್,  ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಸೇರಿದಂತೆ ಜಿಲ್ಲಾ ಪಂಚಾಯತಿ, ನಗರಸಭೆ ಹಾಗೂ ತಾಲೂಕು ಪಂಚಾಯತಿಯ ಸರ್ವ ಸದಸ್ಯರು ಪಾಲ್ಗೊಳ್ಳುವರು.  ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 8.30 ಕ್ಕೆ ಡಿ.ದೇವರಾಜ ಅರಸುರವರ ಭಾವಚಿತ್ರದ ಮೆರವಣಿಗೆ ಶ್ರೀ ಗವಿಸಿದ್ದೇಶ್ವರ ಕ್ರೀಡಾಂಗಣದಿಂದ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನ ತಲುಪಲಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್  ತಿಳಿಸಿದ್ದಾರೆ.

Leave a Reply