20ನೇ ಸ್ಥಾನಕ್ಕೇರಿದ ಕೊಪ್ಪಳ : ವಿದ್ಯಾರ್ಥಿಗಳಿಗೆ ಸನ್ಮಾನ

ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಸಲ ಕೊಪ್ಪಳ ಜಿಲ್ಲೆಯ ಎಸ್ ಎಸ್ ಎಲ್ ಎಸಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸುಧಾರಣೆಯಾಗಿದ್ದು. ಕೊಪ್ಪಳ 20ನೇ ಸ್ಥಾನ ಗಳಿಸಿದೆ. ಇದಕ್ಕೆ ಎಲ್ಲರ ಸಂಘಟಿತ ಪ್ರಯತ್ನವೇ ಕಾರಣ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಅವರು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಗೋಪಿ ನಾಯಕ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿ ೯೭.92ರಷ್ಟು ಅಂಕ ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈ ಸಲ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗಿಂತ ಸರಕಾರಿ ಶಾಲೆಯ, ವಸತಿ ಶಾಲೆಯ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಿ ಸಾಧನೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲೆಯಲ್ಲಿ ೩೦ ಶಾಲೆಗಳು ಶೇ.100ರಷ್ಟು ಫಲಿತಾಂಶ ನೀಡಿವೆ.
Please follow and like us:
error