ಶೈಕ್ಷಣಿಕ ವರ್ಷಾರಂಭಕ್ಕೆ 2095 ಶಾಲೆಗಳ ಬಂದ್ : 5ಕ್ಕಿಂತ ಕಡಿಮೆ ಮಕ್ಕಳಿರುವ 595 ಶಾಲೆಗಳನ್ನು ಮುಚ್ಚಲು ಈಗಾಗಲೇ ಆದೇಶ: ಸಚಿವ ಕಾಗೇರಿ

ಬೆಂಗಳೂರು: ರಾಜ್ಯದಲ್ಲಿ ಹತ್ತಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳನ್ನು ಸಮೀಪದ ಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ಸಾಲಿನ ವೇಳೆಗೆ 2,095 ಶಾಲೆಗಳನ್ನು ಮುಚ್ಚಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ಇಲ್ಲಿ ತಿಳಿಸಿದರು.
595 ಶಾಲೆಗಳಲ್ಲಿ ಐದಕ್ಕಿಂತ ಕಡಿಮೆ ಮಕ್ಕಳಿದ್ದು, ಆ ಶಾಲೆಗಳನ್ನು ಈ ವರ್ಷವೇ ಪಕ್ಕದ ಶಾಲೆಗಳಿಗೆ ಜೋಡಿಸಲಾಗುತ್ತಿದೆ. 1,500 ಶಾಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ಮಕ್ಕಳಿದ್ದು, ಅಂತಹ ಶಾಲೆಗಳನ್ನು ಬರುವ ವರ್ಷ ಪಕ್ಕದ ಶಾಲೆಗಳಲ್ಲಿ ವಿಲೀನಗೊಳಿಸಲಾಗುವುದು ಎಂದರು.
`ನಾನು ಅಧಿಕಾರಕ್ಕೆ ಬಂದ ಆರಂಭದಲ್ಲಿ 500 ಶಾಲೆಗಳನ್ನು ಜೋಡಿಸಲಾಗಿತ್ತು. ಕೇಂದ್ರ ಸರ್ಕಾರ 20ಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳನ್ನು ವಿಲೀನ ಮಾಡಿ ಎಂದು ಹೇಳಿದೆ. ಆದರೆ ನಾವು 10ಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳನ್ನು ಮಾತ್ರ ವಿಲೀನ ಮಾಡುತ್ತಿ ದ್ದೇವೆ` ಎಂದರು.
ಹಣದ ಕೊರತೆ ಅಥವಾ ಶಾಲೆಗಳನ್ನು ನಡೆಸಲು ಕಷ್ಟ ಎಂಬ ಕಾರಣಕ್ಕೆ ವಿಲೀನ ಮಾಡುತ್ತಿಲ್ಲ. ಅಂತಹ ಶಾಲೆಗಳ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಹತ್ತಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳನ್ನು ಪಕ್ಕದ ಶಾಲೆಗಳಿಗೆ ಜೋಡಿಸುವ ಬಗ್ಗೆ ಪ್ರಸ್ತಾವ ನೀಡುವಂತೆ ಸೂಚಿಸಲಾಗಿದೆ ಎಂದರು.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಶಾಲೆಗಳ ನಡುವಿನ ಅಂತರ ಹೆಚ್ಚಾಗಿದ್ದು, ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಶಾಲೆಗಳು ತುಂಬಾ ದೂರವಿದ್ದರೆ ಹೋಗಿ ಬರಲು ಸಾರಿಗೆ ವೆಚ್ಚ ನೀಡಲಾಗುವುದು.
ಜನಸಂಖ್ಯೆ ಕಡಿಮೆಯಾಗುತ್ತಿರುವುದು, ನಗರ ಪ್ರದೇಶದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂದು ಪೋಷಕರು ನಗರದ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿರುವುದರಿಂದ ಗ್ರಾಮೀಣ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದರು.
ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಮುಂಚೆ 2008ರ ವರೆಗೆ ಖಾಲಿ ಇರುವ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿತ್ತು. ಆದರೆ ಈಗ 2008ರ ನಂತರವೂ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದರು.
ಕಡ್ಡಾಯ ಪ್ರಾಥಮಿಕ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಆದರೆ ಹಣಕಾಸಿನ ಬದ್ಧತೆಯನ್ನು ಕೇಂದ್ರ ಸರ್ಕಾರ ತೋರಿಸಬೇಕು. ಕಾಯ್ದೆ ಜಾರಿ ಸಂಬಂಧ ಕರಡು ನಿಯಮಾ ವಳಿಗಳನ್ನು ರೂಪಿಸಲಾಗಿದೆ ಎಂದರು.
`ಆರರಿಂದ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕಡ್ಡಾಯಗೊಳಿಸಿರುವುದರಿಂದ 8ನೇ ತರಗತಿಯನ್ನು ಹಿರಿಯ ಪ್ರಾಥಮಿಕ ಶಾಲೆಯ ವ್ಯಾಪ್ತಿಗೆ ತರಬೇಕು ಎಂದು ಕೇಂದ್ರ ಹೇಳು ತ್ತಿದೆ. ಕರ್ನಾಟಕ, ಮಹಾರಾಷ್ಟ್ರ ಹೊರತುಪಡಿಸಿದರೆ ಬಹುತೇಕ ಎಲ್ಲ ರಾಜ್ಯಗಳು ಈಗಾಗಲೇ 8ನೇ ತರಗತಿಯನ್ನು ಪ್ರಾಥಮಿಕ ಶಾಲೆ ವ್ಯಾಪ್ತಿಗೆ ತಂದಿವೆ. ಈ ಬಗ್ಗೆ ಚರ್ಚೆ ಆಗಬೇಕಿರುವು ದರಿಂದ ನಾವು ಸಮಯಾವಕಾಶ ಕೇಳಿದ್ದೇವೆ` ಎಂದು ಕಾಗೇರಿ ಹೇಳಿದರು.
-೨೦೯೫ ಶಾಲೆ ಬಾಗಿಲು ಬಂದ್
-೫ಕ್ಕಿಂತ ಕಡಿಮೆ ಮಕ್ಕಳಿರುವ ೫೯೫ ಶಾಲೆಗಳನ್ನು ಮುಚ್ಚಲು ಈಗಾಗಲೇ ಆದೇಶ: ಸಚಿವ ಕಾಗೇರಿ
ಬೆಂಗಳೂರು: ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ರಾಜ್ಯದ ೨೦೯೫ ಶಾಲೆಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಮಕ್ಕಳ ಸಂಖ್ಯೆ ೫ಕ್ಕಿಂತ ಕಡಿಮೆ ಇರುವ ೫೯೫ ಶಾಲೆಗಳನ್ನು ಮುಚ್ಚಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ೬ರಿಂದ ೧೦ ವಿದ್ಯಾರ್ಥಿಗಳಿರುವ ೧೫೦೦ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಬಂದ್ ಮಾಡಲು ನಿರ್ಧರಿಸಿದೆ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.ಉದ್ಯೋಗ ಹುಡುಕಿಕೊಂಡು ಗ್ರಾಮೀಣ ಪ್ರದೇಶದ ಜನ ನಗರ ಪ್ರದೇಶಗಳಿಗೆ ವಲಸೆ ಹೋಗು ತ್ತಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪ್ರಮಾಣ ಕಡಿಮೆಯಾಗಲು ಇದೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
ಶಾಲೆಗಳನ್ನು ಬಂದ್ ಮಾಡುವುದರಿಂದ ಅಲ್ಲಿ ಕಲಿಯುತ್ತಿರುವ ಮಕ್ಕಳಿಗೆ ತೊಂದರೆ ಆಗುತ್ತದೆ. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಪರಿಶೀಲನೆ ನಡೆಸಲು ಆಯಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.
ಹಣಕಾಸು ಕೊರತೆಯಿಂದಾಗಿ ಶಾಲೆಗಳನ್ನು ಮುಚ್ಚುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.
ವಿದ್ಯಾರ್ಥಿಗಳ ಸಂಖ್ಯೆ ೧ರಿಂದ ೨೦ ರವರೆಗೆ ಇರುವ ಶಾಲೆಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಅದರೆ ನಾವು ೧ರಿಂದ ೧೦ ಮಕ್ಕಳಿರುವ ಶಾಲೆಗಳನ್ನು ಮಾತ್ರ ಆಯ್ಕೆ ಮಾಡಿದ್ದೇವೆ.
ಗ್ರಾಮೀಣ ಜನರ ವಲಸೆ ಒಂದೆಡೆಯಾದರೆ ಸಮೀಪದ ನಗರ ಮತ್ತು ಪಟ್ಟಣ ಪ್ರದೇಶಳಿಗೆ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುತ್ತಿಲ್ಲ. ಜೊತೆಗೆ ಇಂಗ್ಲಿಷ್ ಶಾಲೆಗಳ ಮೇಲಿನ ವ್ಯಾಮೋಹ ಮತ್ತೊಂದು ಕಾರಣ ಎಂದು ಹೇಳಿದರು. ಶಾಲೆಗಳನ್ನು ಮುಚ್ಚಿ ಅಲ್ಲಿಯ ವಿದ್ಯಾರ್ಥಿಗಳನ್ನು ಪಕ್ಕದ ಶಾಲೆಗಳಿಗೆ ಸೇರಿಸುವಂತೆ ಶಿಕ್ಷಕರ ವರ್ಗಾವಣೆಗೂ ಅದೇ ನೀತಿ ಅನುಸರಿಸಲಾಗುವುದು ಎಂದು ಕಾಗೇರಿ ತಿಳಿಸಿದರು.
೮ನೇ ತರಗತಿಯನ್ನು ಮಾಧ್ಯಮಿಕ ಶಿಕ್ಷಣದ ವ್ಯಾಪ್ತಿಗೆ ತರಬೇಕು ಎಂಬುದು ಕೇಂದ್ರದ ನಿರ್ಧಾರ. ಅದರೆ ನಾನು ೧ರಿಂದ ೭ ಮತ್ತು ೮ರಿಂದ ೧೦ನೇ ತರಗತಿ ವರೆಗಿನ ಶಿಕ್ಷಣ ಪದ್ಧತಿಗೆ ಹೊಂದಿ ಕೊಂಡಿದ್ದೇವೆ. ಹೀಗಾಗಿ ಅದರಲ್ಲಿ ಬದಲಾವಣೆ ಮಾಡುವುದು ಸರಿಯಲ್ಲ.
ಎಲ್ಲ ರಾಜ್ಯಗಳು ಬದಲಾವಣೆಗೆ ಮುಂದಾಗಿವೆ. ಆದರೆ, ಕರ್ನಾಟಕ ಮಾತ್ರ ಒಪ್ಪದಿರುವುದಕ್ಕೆ ಕಾರಣ ಏನು? ಎಂದು ಕೇಂದ್ರ ಸರ್ಕಾರ ಪ್ರಶ್ನಿಸಿದೆ. ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ನಾವು ಕಾಲಾವಕಾಶ ಕೇಳಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ೨೦೦೮ರವರೆಗೆ ಖಾಲಿ ಇರುವ ಎಲ್ಲ ಬೋಧಕ ಸಿಬ್ಬಂದಿ ಹುದ್ದೆ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನು ಮುಂದೆ ಹುದ್ದೆ ಖಾಲಿಯಾದ ಮರು ದಿನವೇ ಭರ್ತಿ ಮಾಡುವಂತ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಉದ್ಯೋಗ ಹುಡುಕಿಕೊಂಡು ಗ್ರಾಮೀಣ ಪ್ರದೇಶದ ಜನ ನಗರ ಪ್ರದೇಶಗಳಿಗೆ ವಲಸೆ ಹೋಗು ತ್ತಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪ್ರಮಾಣ ಕಡಿಮೆಯಾಗಲು ಇದೇ ಪ್ರಮುಖ ಕಾರಣ.
Please follow and like us:
error

Related posts

Leave a Comment