ನ.23 ರಂದು ಹುಲಿಗಿಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನ.23 ರಂದು ಮಧ್ಯಾಹ್ನ 3 ಗಂಟೆಗೆ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ರಾಜೀವಗಾಂಧಿ ಚೈತನ್ಯ ಯೋಜನೆಯ ಅಭ್ಯರ್ಥಿಗಳಿಗೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಘನತ್ಯಾಜ್ಯ ವಿಲೇವಾರಿ ಕೇಂದ್ರ ಪ್ರಾರಂಭ, 75001ನೇ ಶೌಚಾಲಯ ಉದ್ಘಾಟನೆ, 28 ಗ್ರಾಮಗಳ ಘನತ್ಯಾಜ್ಯದಿಂದ ಗೊಬ್ಬರ ತಯಾರಿಸಲು ಜೈವಿಕ ತಂತ್ರಜ್ಞಾನದ ಬಳಕೆಯ ಪ್ರಾರಂಭ ಹಾಗೂ 2013-14ನೇ ಸಾಲಿನಲ್ಲಿ ಅತಿಹೆಚ್ಚು ಶೌಚಾಲಯ ನಿರ್ಮಿಸಲು ಪ್ರೋತ್ಸಾಹಿಸಿದವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರು ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್. ತಂಗಡಗಿ, ಆರೋಗ್ಯ ಸಚಿವ ಯು.ಟಿ. ಖಾದರ, ಜಿಲ್ಲಾ ಪಂಚಾಯತ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ಕೊಪ್ಪಳ ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ಗಂಗಾವತಿ ತಾ.ಪಂ. ಅಧ್ಯಕ್ಷೆ ಈರಮ್ಮ, ಯಲಬುರ್ಗಾ ತಾಲೂಕು ಪಂಚಾಯತಿ ಅಧ್ಯಕ್ಷೆ ಮಹಾದೇವಿ ಕಂಬಳಿ, ಕುಷ್ಟಗಿ ತಾಲೂಕು ಅಧ್ಯಕ್ಷೆ ಸುವರ್ಣ ತುರಾಯಿ, ಹುಲಿಗಿ ಗ್ರಾ.ಪಂ.ಅಧ್ಯಕ್ಷ ಪಾಲಾಕ್ಷಗೌಡ ಗುಂಗಾಡಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಶಿವಶೈಲಂ, ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್‍ಕುಮಾರ, ಕೆಎಸ್‍ಆರ್‍ಎಲ್‍ಪಿಎಸ್‍ನ ಅಭಿಯಾನ ನಿರ್ದೇಶಕ ಡಿ.ವಿ. ಸ್ವಾಮಿ, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್ ಸೇರಿದಂತೆ ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳ ಸರ್ವ ಸದಸ್ಯರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.

Leave a Reply