ಅನುಪಯುಕ್ತ ಕೊಳವೆ ಬಾವಿಗಳಿಂದ ಅನಾಹುತ : ಜೂ. 23 ರಂದು ಸಭೆ

 ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಕೊರೆಯಿಸಲಾಗಿರುವ ಕೊಳವೆ ಬಾವಿಗಳ ಪೈಕಿ ಸುಸ್ಥಿತಿಯಲ್ಲಿರುವ ಕೊಳವೆ ಬಾವಿಗಳ ಮಾಹಿತಿ ಪಡೆಯುವುದು ಮತ್ತು ನೀರಿನ ಜಲ ಇಲ್ಲದಿರುವುದರಿಂದ ಅಥವಾ ನೀರಿನ ಜಲ ಬತ್ತುವಿಕೆಯಿಂದಾಗಿ ಅನುಪಯುಕ್ತಗೊಂಡಿರುವ ಕೊಳವೆ ಬಾವಿಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಚರ್ಚಿಸಲು ಜೂ. 23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‍ರಾಜ್ ಅವರು ವಹಿಸುವರು.  ಸಭೆಯಲ್ಲಿ  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಬೋರ್‍ವೆಲ್ ಅಸೋಸಿಯೇಶನ್‍ನ ಪದಾಧಿಕಾರಿಗಳು, ನಗರಸಭೆ, ಪುರಸಭೆಗಳ ಮುಖ್ಯಾಧಿಕಾರಿಗಳು, ಹಲವು ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‍ರಾಜ್  ತಿಳಿಸಿದ್ದಾರೆ.

Leave a Reply