ಆ.24 ರಂದು ಕೊಪ್ಪಳದಲ್ಲಿ ಬೃಹತ್ ರಕ್ತದಾನ ಶಿಬಿರ

 ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೊಪ್ಪಳ ಜಿಲ್ಲಾ ಶಾಖೆಯ ವತಿಯಿಂದ ಬೃಹತ್ ರಕ್ತದಾನ ಶಿಬಿರ, ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮೊದಲನೆ ಮಹಡಿಯಲ್ಲಿರುವ ರಕ್ತನಿಧಿ ಕೇಂದ್ರದಲ್ಲಿ ಆ.24 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
   ಅಂದು ಜರುಗುವ ರಕ್ತದಾನ ಶಿಬಿರದಲ್ಲಿ ಎಲ್ಲಾ ಇಲಾಖೆಗಳ ಸಿಬ್ಬಂದಿಯವರು ಮತ್ತು ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಮನವಿ ಮಾಡಿದ್ದಾರೆ.
Please follow and like us:
error