ಡಿ.24 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ

: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ.24 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
     ಮುಖ್ಯಮಂತ್ರಿಗಳು ಡಿ.24 ರಂದು ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು, ಗಿಣಗೇರಾ ಏರ್‍ಸ್ಟ್ರಿಪ್‍ಗೆ (ಎಂ.ಎಸ್.ಪಿ.ಎಲ್. ವಿಮಾನ ನಿಲ್ದಾಣ) ಬೆಳಿಗ್ಗೆ 11 ಗಂಟೆಗೆ ಆಗಮಿಸುವರು. ನಂತರ ಕೊಪ್ಪಳ ನಗರಕ್ಕೆ ಆಗಮಿಸಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 1.30 ಕ್ಕೆ ಕೊಪ್ಪಳದಿಂದ ರಸ್ತೆ ಮೂಲಕ ಕುಷ್ಟಗಿಗೆ ಪ್ರಯಾಣ ಬೆಳೆಸುವರು.   ಕುಷ್ಟಗಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಜರುಗುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮುಖ್ಯಮಂತ್ರಿಗಳು ಅದೇ ದಿನ ಸಂಜೆ 4.30 ಕ್ಕೆ ಕುಷ್ಟಗಿಯಿಂದ ಕೊಪ್ಪಳ ರಸ್ತೆ ಮೂಲಕ ಗಿಣಗೇರಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ ನಂತರ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Leave a Reply