26 ರಂದು ಕುಕನೂರ ನೂತನ ತಾಲೂಕ ಉದ್ಘಾಟನಾ ಸಮಾರಂಭ

.
ಕೊಪ್ಪಳ ಜಿಲ್ಲೆಯ ಕುಕನೂರ ನೂತನ ತಾಲೂಕ ಉದ್ಘಾಟನಾ ಸಮಾರಂಭ ಜ. 26 ರಂದು ಸಾಯಂಕಾಲ 5 ಗಂಟೆಗೆ ಕುಕನೂರಿನ ಪ್ರವಾಸಿಮಂದಿರ ಎದುರಗಡೆಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು. ಕುಕನೂರ ಪಟ್ಟಣ ಪಂಚಾಯತ ಅಧ್ಯಕ್ಷೆ ಶಾಂತಲಾ ರಾಮಣ್ಣ ಚಲವಾದಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಕೆ. ರಾಘವೇಂದ್ರ ಹಿಟ್ನಾಳ್, ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಯಲಬುರ್ಗಾ ತಾ.ಪಂ ಅಧ್ಯಕ್ಷೆ ಲಕ್ಷ್ಮೀ ದ್ಯಾಮಪ್ಪ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಕುಕನೂರ ಪ.ಪಂ ಉಪಾಧ್ಯಕ್ಷ ರಹೆಮಾನಸಾಬ ಮಕ್ಕಪ್ಪನವರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಜಿ.ಪಂ., ಯಲಬುರ್ಗಾ ತಾ.ಪಂ. ಹಾಗೂ ಕುಕನೂರ ಪ.ಪಂ ಸರ್ವ ಸದಸ್ಯರು ಪಾಲ್ಗೊಳ್ಳುವರು.

Please follow and like us:
error