ಡಿ.26 ರಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷೆ

): ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪ್ರಸಕ್ತ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಇದೇ ಡಿ.26, 27 ಹಾಗೂ 28 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 22 ಕೇಂದ್ರಗಳಲ್ಲಿ ನಡೆಯಲಿವೆ.ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಈಗಾಗಲೆ ಅಂಚೆ ಮೂಲಕ ಕಳುಹಿಸಲಾಗಿದ್ದು, ಡಿ.15 ರ ನಂತರವೂ ಪ್ರವೇಶಪತ್ರ  ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರಲ್ಲಿ ವಿಚಾರಿಸಬಹುದು. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ ಸಂಖ್ಯೆ: 080-26623584, ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ  www.kasapa.in   ಮೂಲಕ ಪಡೆದುಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.

Leave a Reply