ದ್ವಿತೀಯ ಪಿಯುಸಿ ಫಲಿತಾಂಶ ; ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ :ಕೊಪ್ಪಳ 27ನೇ ಸ್ಥಾನ

ಬೆಂಗಳೂರು, ಮೇ 8: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯಾದ್ಯಂತ ಒಟ್ಟಾರೆ ಶೇ. 68.75ರಷ್ಟು ಫಲಿತಾಂಶ ದಾಖಲಾಗಿದೆ. ಪ್ರತಿ ವರ್ಷದಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ.86.04 ಫಲಿತಾಂಶ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಿಯು ಬೋರ್ಡ್‌ನಲ್ಲಿ, ಸುದ್ದಿಗೋಷ್ಠಿಯನ್ನು ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಇಂದು ಬೆಳಗ್ಗೆ ಫಲಿತಾಂಶವನ್ನು ಪ್ರಕಟಿಸಿದ್ದಾರೆ. 
ದ್ವಿತೀಯ ಪಿಯುಸಿ ಫಲಿತಾಂಶ ಇಂದು 9 ಗಂಟೆಗೆ ವೆಬ್ ಸೈಟ್`ಗಳಲ್ಲಿ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಮೊದಲ ಸ್ಥಾನದಲ್ಲಿದ್ದು,  ಶೇ. 86.4 ಫಲಿತಾಂಶ ದಾಖಲಾಗಿದೆ. ಬೀದರ್ ಕೊನೆಯ ಸ್ಥಾನದಲ್ಲಿದ್ದು, 44.95 ಪ್ರತಿಶತ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
45 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದ್ದು, 42 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಶೇಕಡಾ 60.47ರಷ್ಟು ಫಲಿತಾಂಶ ಬಂದಿದೆ. ಒಟ್ಟು 6 ಲಕ್ಷದ 13 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಒಟ್ಟು 3,71,166 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶದ ವಿವರ:
ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ – ಶೇ. 86.04
ಉಡುಪಿ ದ್ವಿತೀಯ ಸ್ಥಾನ – ಶೇ.85.57
ಕೊಡಗು 3ನೆ ಸ್ಥಾನ – ಶೇ.75.87
ಬೀದರ್ ಕೊನೆಯ ಸ್ಥಾನ – ಶೇ. 44.95
ಬೆಂಗಳೂರು ಗ್ರಾಮಾಂತರ 9ನೆ ಸ್ಥಾನ
ಕಲಾ ವಿಭಾಗ- ಶೇ.51.25ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ವಾಣಿಜ್ಯ ವಿಭಾಗ- ಶೇ.70.08ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ವಿಜ್ಞಾನ ವಿಭಾಗ- ಶೇ.62.19ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳು – 36,344
ಪ್ರಥಮ ದರ್ಜೆ ಪಡೆದ ವಿದ್ಯಾರ್ಥಿಗಳು – 1,83,788
ದ್ವಿತೀಯ ದರ್ಜೆ ಪಡೆದ ವಿದ್ಯಾರ್ಥಿಗಳು – 69, 914
ತೃತೀಯ ದರ್ಜೆ ಪಡೆದ ವಿದ್ಯಾರ್ಥಿಗಳು – 39,768    
Please follow and like us:
error