3ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ

ನಗರದಲ್ಲಿ ನಡೆದಿರುವ 3ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಆರಂಭಕ್ಕೂ ಮುನ್ನ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು. ತೆರೆದ ವಾಹನದಲ್ಲಿ ನಡೆದ ಮೆರವಣಿಗೆಯಲ್ಲಿ ದಸಾಪ ಜಿಲ್ಲಾಧ್ಯಕ್ಷ ಮಂಜುನಾಥ ಗೊಂಡಬಾಳ, ಚುಸಾಪ ಅಧ್ಯಕ್ಷ ಹನುಮಂತಪ್ಪ ಅಂಡಗಿ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಲಾತಂಡಗಳು ಭಾಗವಹಿಸಿದ್ದವು. ಸಾಹಿತ್ಯ ಭವನ ತಲುಪಿದ ಮೇಲೆ ಪುಸ್ತಕ ಮಾರಾಟ ಮಳಿಗೆ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಶರಣಪ್ಪ ವಡಿಗೇರಿ ಕ್ರಾಂತಿಗೀತೆಗಳನ್ನಾಡಿದರು.
Please follow and like us:
error