ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ಮಾರ್ಚ್ 31 ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಕೊರೋನಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಣ

ಕೊಪ್ಪಳ ಮಾ. : ಜಿಲ್ಲೆಯಲ್ಲಿ ಕೋವಿಡ್-19 ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಲು ದಂಡ ಪ್ರಕ್ರಿಯೆ ಸಂಹಿತೆ 1973 ಕಲಂ 133, 144(3)ರನ್ವಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ-1897 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ಸ್, 2020(12) ರ ಪ್ರಕಾರ ಮಾರ್ಚ್ 31 ರವರೆಗೆ ನಿಷೇಧಾಜ್ಞೆ  ಆದೇಶದ ಅವಧಿಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಆದೇಶ  ಹೊರಡಿಸಿದ್ದಾರೆ.
ಈ ಆದೇಶದ ಪ್ರಕಾರ 5 ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಜಿಲ್ಲೆಗೆ ಆಗಮಿಸುವ ಎಲ್ಲಾ ಅಂತರಾಷ್ಟಿçÃಯ/ಭಾರತೀಯ (ಯಾವುದೇ ದೇಶಕ್ಕೆ ಭೇಟಿ ನೀಡಿರಲಿ) ಹಾಗೂ ವಿದೇಶಿಯರು ಆಗಮಿಸುವಾಗ ಅವರಿಗೆ ರೋಗ ಲಕ್ಷಣ ಇಲ್ಲದಿದ್ದರೂ ಸಹ ಮನೆಯಲಿ 14 ದಿನಗಳ ಕಾಲ ಪ್ರತ್ಯೇಕವಾಗಿರುವಂತೆ ಮುದ್ರೆ ಹಾಕಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಸಿನಿಮಾ ಮಂದಿರಗಳು, ಮಾಲ್‌ಗಳು, ನಾಟಕಗಳು, ರಂಗಮAದಿರಗಳು, ಪಬ್‌ಗಳು, ನೈಟ್‌ಕ್ಲಬ್‌ಗಳು, ಮ್ಯಾರಾಥಾನ್, ಕ್ರಿಡಾಂಗಣದಲ್ಲಿ ಹೆಚ್ಚಿನ ಪ್ರೇಕ್ಷಕರು ವೀಕ್ಷಿಸುವ ಕ್ರೀಡಾ ಕೂಟಗಳಾದ ಕ್ರಿಕೆಟ್, ಫುಟ್‌ಬಾಲ್, ಬಾಸ್ಕೆಟ್‌ಬಾಲ್, ಹಾಕಿ ಮತ್ತು ಇತರೆ ಕ್ರೀಡೆಗಳನ್ನು ಹಾಗೂ ಹೆಚ್ಚಾಗಿ ಜನರು ಸೇರುವಂತಹ ಮದುವೆ, ಜಾತ್ರೆ, ಸಂತೆ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಬೇಸಿಗೆ ಶಿಬಿರಗಳು, ಸಭೆ, ಸಮಾರಂಭಗಳು, ಕ್ರೀಡಾಕೂಟಗಳು, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಹೆಚ್ಚು ಜನರು ಬಳಸುವ ಸ್ವಿಮ್ಮಿಂಗ್ ಫೂಲ್, ಜಿಮ್ ಮುಂತಾದವುಗಳನ್ನು ಮುಚ್ಚಬೇಕು. ಹೆಚ್ಚಾಗಿ ವಿದೇಶಿಯರು ಪ್ರಯಾಣಿಸುವ ಐ.ಟಿ., ಬಿ.ಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸಬೇಕು. ಖಾಸಗಿ ವೈದ್ಯರು, ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂ ಗಳು ಫೆಬ್ರವರಿ 21 ರ ನಂತರ ವಿದೇಶದಿಂದ ಬಂದು ರೋಗ ಲಕ್ಷಣಗಳು ಇರುವ ರೋಗಿಗಳು ಇದ್ದಲ್ಲಿ ತಡಮಾಡದೆ ಕಡ್ಡಾಯವಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ/ಫ್ಯಾಕ್ಸ್/ವಾಟ್ಸಪ್/104 ಸಹಾಯವಾಣಿ ಮೂಲಕ ತಿಳಿಸಬೇಕು. ಪ್ರತಿಯೊಬ್ಬರೂ ತಮ್ಮಿಂದ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆಗಳು ಮತ್ತು ಸರ್ಕಾರಿ ಕಚೇರಿಗಳು ಅಬಾಧಿತವಾಗಿ ಕಾರ್ಯನಿರ್ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error