371ನೇ ಕಲಂ ಹೋರಾಟ ರೂಪಿಸಲು ಪೂರ್ವಭಾವಿ ಸಭೆ ಮಾರ್ಚ 19ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ

ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ 371ನೇ ಕಲಂ ತಿದ್ದುಪಡಿಗೆ ಆಗ್ರಹಿಸಿ ಹೋರಾಟ ರೂಪಿಸಲು ಪೂರ್ವಭಾವಿ ಸಭೆ ಮಾರ್ಚ 19ರಂದು ಬೆಳಿಗ್ಗೆ ೧೦.30ಕ್ಕೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಕರೆಯಲಾಗಿದೆ.ಜಿಲ್ಲೆಯ ಎಲ್ಲ ಪಕ್ಷಗಳ ಮುಖಂಡರು, ಸಂಘ, ಸಂಸ್ಥೆ, ಸಂಘಟಕರು ಭಾಗವಹಿಸುವಂತೆ ಸಂವಿಧಾನದ ಅನುಚ್ಛೇದ ೩೭೧ ರತಿದ್ದುಪಡಿಯ ಜಿಲ್ಲಾ ಹೋರಾಟ ಸಮಿತಿ ಹೇಳಿದೆ. ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ರೈಲ್ ರೋಕೋ, ರಸ್ತಾ ರೋಖೋ, ಸರದಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ.

Leave a Reply